AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಸ್ಥಾನದ ಸುಪ್ರಭಾತ ಹಾಡು ಹಾಕಿರುವುದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್

ದೇವಸ್ಥಾನದ ಸುಪ್ರಭಾತ ಹಾಡು ಹಾಕಿರುವುದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್

ನವೀನ್ ಕುಮಾರ್ ಟಿ.
| Edited By: |

Updated on: Feb 02, 2026 | 4:32 PM

Share

ದೇವಸ್ಥಾನದ (Temple) ಸುಪ್ರಭಾತ ಹಾಡಿನ ವಿಚಾರಕ್ಕೆ ಹಿಂದೂ ಹಾಗೂ ಮುಸ್ಲಿಂ (Hindu And Muslim) ಯುವಕರ ನಡುವೆ ಮಾತಿನ ಚಕಮಕಿ ನಡೆದಿರುವ ಘಟನೆ ದೊಡ್ಡಬಳ್ಳಾಪುರ ನಗರದ ಶಾಂತಿ ನಗರದಲ್ಲಿ ನಡೆದಿದೆ. ದೊಡ್ಡಬಳ್ಳಾಪುರ ನಗರದ ಶಾಂತಿ ನಗರದ ಶನಿಮಹಾತ್ಮ ದೇವಸ್ಥಾನದಲ್ಲಿ ಇಂದು (ಫೆಬ್ರವರಿ 02) ಬೆಳಗ್ಗೆ ಸುಪ್ರಭಾತ ಹಾಡು ಹಾಕಿದ್ದು, ಇದಕ್ಕೆ ಮುಸ್ಲಿಂ ಯುವಕನೋರ್ವ ಆಕ್ಷೇಪ ವ್ಯಕ್ತಪಡಿಸಿದ್ದಾನೆ. ಮನೆಯಲ್ಲಿ ತಾಯಿ ಮಲಗಿದ್ದಾಳೆ ಸೌಂಡ್ ಕಡಿಮೆ ಮಾಡು ಎಂದಿದ್ದಾನೆ. ಇದಕ್ಕೆ ಆಕ್ರೋಶಗೊಂಡು ಹಿಂದೂಗಳು ಮಸೀದಿಯಲ್ಲಿ ಅಜಾನ್ ಕೂಗಿದರೆ ನಾವು ಹೀಗೆ ಕೇಳುತ್ತೀವಾ ಎಂದು ಪ್ರಶ್ನಿಸಿದ್ದಾರೆ

ದೊಡ್ಡಬಳ್ಳಾಪುರ, ಫೆಬ್ರವರಿ 02): ದೇವಸ್ಥಾನದ (Temple) ಸುಪ್ರಭಾತ ಹಾಡಿನ ವಿಚಾರಕ್ಕೆ ಹಿಂದೂ ಹಾಗೂ ಮುಸ್ಲಿಂ (Hindu And Muslim) ಯುವಕರ ನಡುವೆ ಮಾತಿನ ಚಕಮಕಿ ನಡೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ ಶಾಂತಿ ನಗರದಲ್ಲಿ ನಡೆದಿದೆ. ದೊಡ್ಡಬಳ್ಳಾಪುರ ನಗರದ ಶಾಂತಿ ನಗರದ ಶನಿಮಹಾತ್ಮ ದೇವಸ್ಥಾನದಲ್ಲಿ ಇಂದು (ಫೆಬ್ರವರಿ 02) ಬೆಳಗ್ಗೆ ಸುಪ್ರಭಾತ ಹಾಡು ಹಾಕಿದ್ದು, ಇದಕ್ಕೆ ಮುಸ್ಲಿಂ ಯುವಕನೋರ್ವ ಆಕ್ಷೇಪ ವ್ಯಕ್ತಪಡಿಸಿದ್ದಾನೆ. ಮನೆಯಲ್ಲಿ ತಾಯಿ ಮಲಗಿದ್ದಾಳೆ ಸೌಂಡ್ ಕಡಿಮೆ ಮಾಡು ಎಂದಿದ್ದಾನೆ. ಇದಕ್ಕೆ ಆಕ್ರೋಶಗೊಂಡು ಹಿಂದೂಗಳು ಮಸೀದಿಯಲ್ಲಿ ಅಜಾನ್ ಕೂಗಿದರೆ ನಾವು ಹೀಗೆ ಕೇಳುತ್ತೀವಾ ಎಂದು ಪ್ರಶ್ನಿಸಿದ್ದಾರೆ. ಹೀಗೆ ಎರಡು ಗುಂಪಿನ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇನ್ನು ದೇವಸ್ಥಾನದ ಪೂಜಾರಿ ನೀಡಿದ ದೂರಿನನ್ವಯ ದೊಡ್ಡಬಳ್ಳಾಪುರ ನಗರ ಪೊಲೀಸರಿಂದ ಎನ್ಸಿಆರ್ ದಾಖಲಾಗಿದ್ದು, ಎರಡು ಕಡೆಯವರಿಗೆ ಬುದ್ದಿವಾದ ಹೇಳಿ ಕಳುಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ನವೀನ್ ಕುಮಾರ್ ಟಿ.
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More