ಪಾಕಿಸ್ತಾನದ ಜೊತೆ ಯುದ್ಧ ಮಾಡುವ ಅನಿವಾರ್ಯತೆ ಇಲ್ಲ, ನಾನು ಯುದ್ಧದ ಪರ ಅಲ್ಲ: ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ

Updated on: Apr 26, 2025 | 1:12 PM

ಕರ್ನಾಟಕದಲ್ಲಿರುವ ಪಾಕಿಸ್ತಾನಿಯರನ್ನು ವಾಪಸ್ಸು ಕಳಿಸಬೇಕೆಂಬ ಸೂಚನೆ ನಮಗೆ ಕೇಂದ್ರ ಗೃಹ ಇಲಾಖೆಯಿಂದ ಬಂದಿದೆ, ನಮ್ಮ ಸರ್ಕಾರ ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ, ಎಲ್ಲರನ್ನೂ ವಾಪಸ್ಸು ಕಳಿಸುವ ಕೆಲಸ ಮಾಡುತ್ತೇವೆ, ರಾಜ್ಯದ ನಾನಾಭಾಗಗಳಲ್ಲಿ ಅವರು ತಂಗಿರಬಹುದು, ನಾನಂದುಕೊಳ್ಳುವ ಹಾಗೆ ಬೆಂಗಳೂರಲ್ಲಿ ಅವರ ಸಂಖ್ಯೆ ಜಾಸ್ತಿ ಇರಬಹುದು ಎಂದು ಸಿದ್ದರಾಮಯ್ಯ ಹೇಳಿದರು.

ಮೈಸೂರು, ಏಪ್ರಿಲ್ 26: ಪಾಕಿಸ್ತಾನದ ಜೊತೆ ಯುದ್ಧ ಮಾಡಲೇಬೇಕಾದ ಅನಿವಾರ್ಯತೆ ತಲೆದೋರಿದೆಯಾ? ಯುದ್ಧ (war against Pakistan) ಮಾಡಲೇಬೇಕಾದ ಸ್ಥಿತಿ ಎದುರಾದರೆ ನಿಮ್ಮ ನಿಲುವೇನು ಅಂತ ಮೈಸೂರಲ್ಲಿ ಪತ್ರಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಕೇಳಿದಾಗ, ಯುದ್ಧ ಮಾಡುವ ಅನಿವಾರ್ಯತೆ ಇಲ್ಲ, ಕೇಂದ್ರ ಸರ್ಕಾರ ಬಿಗಿ ಭದ್ರತೆಯ ಕ್ರಮಗಳನ್ನು ತೆಗೆದುಕೊಳ್ಳಬೇಕು, ರಕ್ಷಣಾ ವ್ವವಸ್ಥೆಯನ್ನು ಸದೃಢಗೊಳಿಸಬೇಕು, ಜನಕ್ಕೆ ಖಂಡಿತವಾಗಿಯೂ ಯುದ್ಧ ಬೇಕಿಲ್ಲ, ಶಾಂತಿ ಮತ್ತು ನೆಮ್ಮದಿಯಿಂದ ಬದುಕುವ ವಾತಾವರಣ ಸೃಷ್ಟಿಯಾಗಬೇಕು ಎಂದು ಹೇಳಿದರು.

ಇದನ್ನು ಓದಿ: ಮಲೆ ಮಹದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆ ನಡೆಸಿ ಮಾದಪ್ಪನ ಸನ್ನಿಧಿಗೆ ತೆರಳಿದ ಸಿಎಂ ಸಿದ್ದರಾಮಯ್ಯ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Published on: Apr 26, 2025 01:11 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.