2023ರ ಕರ್ನಾಟಕದ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ?; ಕಾಂಗ್ರೆಸ್ಗೆ ಪ್ರಲ್ಹಾದ್ ಜೋಶಿ ಲೇವಡಿ
ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ವಿರುದ್ಧ ಪ್ರತಿಪಕ್ಷಗಳ ಪ್ರತಿಭಟನೆಯ ಕುರಿತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಸೋತಾಗ, ಅವರು ಚುನಾವಣಾ ಆಯೋಗವನ್ನು ಅನುಮಾನಿಸಲು ಪ್ರಾರಂಭಿಸುತ್ತಾರೆ. ಅವರು EVMಗಳನ್ನು ಪ್ರಶ್ನಿಸುತ್ತಾರೆ, ಏಕೆಂದರೆ ಅವರು ತಮ್ಮ ಬಗ್ಗೆಯೇ ಅನುಮಾನಿಸುತ್ತಾರೆ ಎಂದು ಜೋಶಿ ಹೇಳಿದ್ದಾರೆ. ಕಾಂಗ್ರೆಸ್ನವರು ಕರ್ನಾಟಕದ ಒಂದು ಕ್ಷೇತ್ರದ ಬಗ್ಗೆ ಮಾತನಾಡಿದರು. 2023ರಲ್ಲಿ ಕರ್ನಾಟಕದ ಚುನಾವಣೆಯ ಸಮಯದಲ್ಲಿ ಎಲ್ಲವೂ ಸರಿಯಾಗಿತ್ತಾ? 2024ರಲ್ಲಿ ಸಿದ್ದರಾಮಯ್ಯನವರ ಸರ್ಕಾರ ಅಧಿಕಾರದಲ್ಲಿತ್ತು. ಏನಾದರೂ ವ್ಯತ್ಯಾಸವಾಗಿದ್ದರೆ ಅವರನ್ನು ಕೇಳಿ" ಎಂದು ಹೇಳಿದ್ದಾರೆ.
ನವದೆಹಲಿ, ಜುಲೈ 25: ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯ ವಿರುದ್ಧ ಪ್ರತಿಪಕ್ಷಗಳ ಪ್ರತಿಭಟನೆಯ ಕುರಿತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಪ್ರತಿಕ್ರಿಯೆ ನೀಡಿದ್ದಾರೆ. “ಮತದಾರರ ಪಟ್ಟಿಯ ಪರಿಷ್ಕರಣೆ (SIR) ಇದಕ್ಕೂ ಮೊದಲು ಕೂಡ ಆಗಿದೆ. ಮಹಾರಾಷ್ಟ್ರ ಚುನಾವಣೆಯ ಬಗ್ಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi) ಚುನಾವಣಾ ಆಯೋಗಕ್ಕೆ ಪತ್ರ ಬರೆದ ನಂತರವೂ ಇದು ನಡೆಯುತ್ತಿದೆ. ಕಾಂಗ್ರೆಸ್ ಪಕ್ಷದವರ ಗುಣವೆಂದರೆ, ಅವರು ಸೋತಾಗ ಚುನಾವಣಾ ಆಯೋಗ, ಚುನಾವಣಾ ಮತಯಂತ್ರ (EVM)ವನ್ನು ಅನುಮಾನಿಸುತ್ತಾರೆ. ಇದು ಇದೇ ಮೊದಲೇನಲ್ಲ. ಹಿಂದೆಯೂ ಈ ರೀತಿಯಾಗಿಯೇ ಮಾಡಿದ್ದಾರೆ. ಕಾಂಗ್ರೆಸ್ನವರು ಕರ್ನಾಟಕದ ಒಂದು ಕ್ಷೇತ್ರದ ಬಗ್ಗೆ ಮಾತನಾಡಿದರು. 2023ರಲ್ಲಿ ನಡೆದ ಕರ್ನಾಟಕದ ಚುನಾವಣೆಯ ಸಮಯದಲ್ಲಿ ಎಲ್ಲವೂ ಸರಿಯಾಗಿತ್ತಾ? ಆಗ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದರಿಂದ ಯಾವ ತಗಾದೆಯೂ ಬರಲಿಲ್ಲ. 2024ರಲ್ಲಿ ಸಿದ್ದರಾಮಯ್ಯನವರ ಸರ್ಕಾರ ಅಧಿಕಾರದಲ್ಲಿತ್ತು. ಏನಾದರೂ ವ್ಯತ್ಯಾಸವಾಗಿದ್ದರೆ ಅವರನ್ನು ಕೇಳಿ” ಎಂದು ಹೇಳಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

