ಮಳೆಯಿಂದ ಪಂದ್ಯ ರದ್ದು: ಫೈನಲ್ಗೇರಿದ ಟ್ರೆಂಟ್ ರಾಕೆಟ್ಸ್
Trent Rockets vs Northern Superchargers: 75 ಎಸೆತಗಳಿಗೆ ಸೀಮಿತವಾಗಿದ್ದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನಾರ್ತನ್ ಸೂಪರ್ ಚಾರ್ಜರ್ಸ್ ತಂಡವು 5 ವಿಕೆಟ್ ಕಳೆದುಕೊಂಡು 119 ರನ್ ಕಲೆಹಾಕಿದೆ. ಈ ಗುರಿಯನ್ನು ಬೆನ್ನತ್ತಿದ ಟ್ರೆಂಟ್ ರಾಕೆಟ್ಸ್ ತಂಡವು 5 ಎಸೆತಗಳಲ್ಲಿ 12 ರನ್ ಕಲೆಹಾಕಿದ್ದರು. ಈ ವೇಳೆ ಮಳೆ ಬಂದಿದ್ದರಿಂದ ಪಂದ್ಯವನ್ನು ರದ್ದುಗೊಳಿಸಲಾಯಿತು.
ದಿ ಹಂಡ್ರೆಡ್ ಲೀಗ್ನ ಎಲಿಮಿನೇಟರ್ ಪಂದ್ಯವು ಮಳೆಯಿಂದಾಗಿ ರದ್ದಾಗಿದೆ. ಲಂಡನ್ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟ್ರೆಂಟ್ ರಾಕೆಟ್ಸ್ ಹಾಗೂ ನಾರ್ತನ್ ಸೂಪರ್ ಚಾರ್ಜರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್ನಲ್ಲಿ ಟಾಸ್ ಗೆದ್ದ ಟ್ರೆಂಟ್ ರಾಕೆಟ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು.
ಮಳೆಯ ಕಾರಣ 75 ಎಸೆತಗಳಿಗೆ ಸೀಮಿತವಾಗಿದ್ದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನಾರ್ತನ್ ಸೂಪರ್ ಚಾರ್ಜರ್ಸ್ ತಂಡವು 5 ವಿಕೆಟ್ ಕಳೆದುಕೊಂಡು 119 ರನ್ ಕಲೆಹಾಕಿದೆ. ಈ ಗುರಿಯನ್ನು ಬೆನ್ನತ್ತಿದ ಟ್ರೆಂಟ್ ರಾಕೆಟ್ಸ್ ತಂಡವು 5 ಎಸೆತಗಳಲ್ಲಿ 12 ರನ್ ಕಲೆಹಾಕಿದ್ದರು. ಈ ವೇಳೆ ಮಳೆ ಬಂದಿದ್ದರಿಂದ ಪಂದ್ಯವನ್ನು ರದ್ದುಗೊಳಿಸಲಾಯಿತು.
ಅಲ್ಲದೆ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದ್ದ ಕಾರಣ ಟ್ರೆಂಟ್ ರಾಕೆಟ್ಸ್ ತಂಡವು ಫೈನಲ್ಗೆ ಅರ್ಹತೆ ಪಡೆದುಕೊಂಡಿದೆ. ಅದರಂತೆ ಇಂದು ನಡೆಯಲಿರುವ ಫೈನಲ್ ಮ್ಯಾಚ್ನಲ್ಲಿ ಟ್ರೆಂಟ್ ರಾಕೆಟ್ಸ್ ಹಾಗೂ ಓವಲ್ ಇನ್ವಿನ್ಸಿಬಲ್ಸ್ ತಂಡಗಳು ಮುಖಾಮುಖಿಯಾಗಲಿದೆ.

