Video: ಕೊಲೆ ಪಾತಕಿಯನ್ನು ಹಿಡಿಯಲು ಪೊಲೀಸ್ ಅಧಿಕಾರಿ ಮಾಡಿದ ಸಾಹಸ ನೋಡಿ

Updated on: Jun 27, 2025 | 10:45 AM

ರೌಡಿಗಳು, ಕಳ್ಳರು, ಕೊಲೆ ಪಾತಕಿಗಳನ್ನು ಹಿಡಿಯಲು ಪೊಲೀಸರು ನಾನಾ ರೀತಿಯ ಸಾಹಸಗಳನ್ನು ಮಾಡುತ್ತಾರೆ. ಹಾಗೆಯೇ ಕೊಲೆ ಪಾತಕಿಯನ್ನು ಹಿಡಿಯಲು ತಮಿಳುನಾಡು ಪೊಲೀಸರು ಮಾಡಿರುವ ಸಾಹಸದ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ಹೆದ್ದಾರಿಯಲ್ಲಿ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ ಕೊಲೆ ಪಾತಕಿಯನ್ನು ಹಿಡಿಯಲು ಕಾರು ಬಾಗಿಲು ಹಿಡಿದು ನೇತಾಡಿರುವ ವಿಡಿಯೋ ಇದಾಗಿದೆ

ಚೆನ್ನೈ, ಜೂನ್ 27: ರೌಡಿಗಳು, ಕಳ್ಳರು, ಕೊಲೆ ಪಾತಕಿಗಳನ್ನು ಹಿಡಿಯಲು ಪೊಲೀಸರು ನಾನಾ ರೀತಿಯ ಸಾಹಸಗಳನ್ನು ಮಾಡುತ್ತಾರೆ. ಹಾಗೆಯೇ ಕೊಲೆ ಪಾತಕಿಯನ್ನು ಹಿಡಿಯಲು ತಮಿಳುನಾಡು ಪೊಲೀಸರು ಮಾಡಿರುವ ಸಾಹಸದ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ಹೆದ್ದಾರಿಯಲ್ಲಿ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ ಕೊಲೆ ಪಾತಕಿಯನ್ನು ಹಿಡಿಯಲು ಪೊಲೀಸ್ ಅಧಿಕಾರಿ ಕಾರು ಬಾಗಿಲು ಹಿಡಿದು ನೇತಾಡಿರುವ ವಿಡಿಯೋ ಇದಾಗಿದೆ.

ಮಯಿಲೈ ಶಿವಕುಮಾರ್ ಎಂಬ ವ್ಯಕ್ತಿಯ ಕೊಲೆ ಸೇರಿದಂತೆ ಹಲವಾರು ಅಪರಾಧಗಳಲ್ಲಿ ಭಾಗಿಯಾಗಿದ್ದು, ಪೊಲೀಸರು ಹುಡುಕುತ್ತಿದ್ದರು.ಅಲಗುರಾಜ ತಿರುವಲ್ಲೂರು ಜಿಲ್ಲೆಯಲ್ಲಿ ಅಡಗಿಕೊಂಡಿದ್ದಾನೆ ಎಂಬ ಸುಳಿವಿನ ಮೇರೆಗೆ, ಅವನನ್ನು ಹಿಡಿಯಲು ವಿಶೇಷ ತಂಡಗಳನ್ನು ರಚಿಸಲಾಯಿತು. ಪೊಲೀಸರು ಹತ್ತಿರ ಬರುತ್ತಿದ್ದಂತೆ, ಅಲಗುರಾಜ ಹೆದ್ದಾರಿಯಲ್ಲಿ ಕಾರಿನಲ್ಲಿ ಪರಾರಿಯಾಗಲು ಯತ್ನಿಸಿದ್ದ. ಜಾಮ್ ಬಜಾರ್ ಸಬ್-ಇನ್ಸ್‌ಪೆಕ್ಟರ್ ಆನಂದ ಕುಮಾರ್ ಕಾರನ್ನು ಹಾರಿ ನಿಲ್ಲಿಸಲು ಪ್ರಯತ್ನಿಸಿದ್ದಾರೆ. ಕಾರಿನ ಬಾಗಿಲು ಹಿಡಿದು ನೇತಾಡಿದ್ದರು. ಕೊನೆಗೆ ನಡು ರಸ್ತೆಯಲ್ಲಿ ಅವರನ್ನು ತಳ್ಳಿ ಪರಾರಿಯಾಗಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More