ಬೆಳಗಾವಿಯಲ್ಲಿ ದಿಢೀರ್ ಆಲಿಕಲ್ಲು ಸಹಿತ ಮಳೆ ಅಬ್ಬರ: ವಾಹನ ಸವಾರರು ಪರದಾಟ

Edited By:

Updated on: Mar 17, 2026 | 5:36 PM

ಕರ್ನಾಟಕದಲ್ಲಿ (Karnataka) ಬೇಸಿಗೆಯ (Summer)  ತಾಪ ದಿನದಿಂದ ದಿನಕ್ಕೆ ಏರುತ್ತಿರುವ ಬೆನ್ನಲ್ಲೇ, ವರುಣದೇವ (Rain) ದಿಢೀರ್ ಪ್ರತ್ಯಕ್ಷನಾಗಿ ಧರೆಗೆ ತಂಪೆರೆದಿದ್ದಾನೆ. ಹೌದು... ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಹಾಗೂ ಸಾಧಾರಣ ಮಳೆಯಾಗುತ್ತಿದ್ದು, ಬಿಸಿಲ ಬೇಗೆಯಿಂದ ತತ್ತರಿಸಿದ ಜನತೆಗೆ ವರುಣ ತಂಪೆರೆದಂತಾಗಿದೆ. ಕುಂದಾನಗರಿ ಬೆಳಗಾವಿ ಜಿಲ್ಲೆಯಲ್ಲಿ ಆಲಿಕಲ್ಲು ಮಳೆಯಾಗುತ್ತಿದೆ. ಶಿವಬಸವನಗರ, ನೆಹರು ನಗರ, ಎಸ್ ಪಿ ಕಚೇರಿ ಸುತ್ತಮುತ್ತ ಭಾರಿ ಆಲಿಕಲ್ಲು ಮಳೆಯಾಅಗುತ್ತಿದ್ದು, ಏಕಾಏಕಿ ಸುರಿದ ಮಳೆಗೆ ಜನರು ಕಂಗಾಲಾಗಿದ್ದಾರೆ.

ಬೆಳಗಾವಿ, (ಮಾರ್ಚ್ 17): ಕರ್ನಾಟಕದಲ್ಲಿ (Karnataka) ಬೇಸಿಗೆಯ (Summer)  ತಾಪ ದಿನದಿಂದ ದಿನಕ್ಕೆ ಏರುತ್ತಿರುವ ಬೆನ್ನಲ್ಲೇ, ವರುಣದೇವ (Rain) ದಿಢೀರ್ ಪ್ರತ್ಯಕ್ಷನಾಗಿ ಧರೆಗೆ ತಂಪೆರೆದಿದ್ದಾನೆ. ಹೌದು… ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಹಾಗೂ ಸಾಧಾರಣ ಮಳೆಯಾಗುತ್ತಿದ್ದು, ಬಿಸಿಲ ಬೇಗೆಯಿಂದ ತತ್ತರಿಸಿದ ಜನತೆಗೆ ವರುಣ ತಂಪೆರೆದಂತಾಗಿದೆ. ಕುಂದಾನಗರಿ ಬೆಳಗಾವಿ ಜಿಲ್ಲೆಯಲ್ಲಿ ಆಲಿಕಲ್ಲು ಮಳೆಯಾಗುತ್ತಿದೆ. ಶಿವಬಸವನಗರ, ನೆಹರು ನಗರ, ಎಸ್ ಪಿ ಕಚೇರಿ ಸುತ್ತಮುತ್ತ ಭಾರಿ ಆಲಿಕಲ್ಲು ಮಳೆಯಾಅಗುತ್ತಿದ್ದು, ಏಕಾಏಕಿ ಸುರಿದ ಮಳೆಗೆ ಜನರು ಕಂಗಾಲಾಗಿದ್ದಾರೆ.

ಇದನ್ನೂ ಓದಿ: Bangalore Rain: ಬೆಂಗಳೂರಿನ ಹಲವೆಡೆ ತುಂತುರು ಮಳೆ: ಬಿಸಿಲ ಬೇಗೆಗೆ ತಂಪೆರೆದ ವರುಣ

Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More