ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನೇರ ಪ್ರಸಾರ ಇಲ್ಲಿ ನೋಡಿ

Updated on: Nov 01, 2024 | 9:41 AM

Kannada Rajyotsava 2024: ಕರ್ನಾಟಕದಾದ್ಯಂತ 69ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದರು. ಸುವರ್ಣ ಕರ್ನಾಟಕ ವರ್ಷಚಾರಣೆಯ ಶುಭ ಸಂದರ್ಭದಲ್ಲಿ ನಡೆಯುತ್ತಿರುವ ಕಾರ್ಯಕ್ರಮದ (ಪ್ರಶಸ್ತಿ ಪ್ರದಾನವೂ ಸೇರಿದಂತೆ) ನೇರ ಪ್ರಸಾರ ಇಲ್ಲಿದೆ.

ಬೆಂಗಳೂರು, ನವೆಂಬರ್ 1: ರಾಜ್ಯದಾದ್ಯಂತ 69ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದರು. ಡಿಸಿಎಂ ಡಿಕೆ ಶಿವಕುಮಾರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಶಾಸಕ ರಿಜ್ವಾನ್ ಅರ್ಷದ್, ಸಿಎಸ್ ಶಾಲಿನಿ ರಜನೀಶ್ ಉಪಸ್ಥಿತರಿದ್ದಾರೆ. ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಗೌರವ ರಕ್ಷೆ ಸ್ವೀಕರಿಸಿದರು. ಪ್ರಶಸ್ತಿ ಪ್ರದಾನ ಸಮಾರಂಭವೂ ಕೆಲವೇ ಕ್ಷಣಗಳಲ್ಲಿ ನಡೆಯಲಿದ್ದು, ಕಾರ್ಯಕ್ರಮದ ಲೈವ್ ವಿಡಿಯೋ ಇಲ್ಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More