ಡಬಲ್ ಡೆಕ್ಕರ್ ಫ್ಲೈಓವರ್ ಮೇಲೆ ಕಾರು ಚಲಾಯಿಸಿದ ಡಿಕೆ ಶಿವಕುಮಾರ್, ವಿಡಿಯೋ ನೋಡಿ

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರೇ ಬೆಂಗಳೂರಿನ ಡಬಲ್ ಡೆಕ್ಕರ್ ಫ್ಲೈಓವರ್ ಮೇಲೆ ಕಾರು ಚಲಾಯಿಸಿ ರಸ್ತೆಯನ್ನು ಟೆಸ್ಟ್ ಮಾಡಿದರು. ಈ ಮೂಲಕ ಪ್ರಾಯೋಗಿಕ ವಾಹನ ಸಂಚಾರಕ್ಕೆ ಚಾಲನೆ ನೀಡಿದರು. ಡಬಲ್ ಡೆಕ್ಕರ್ ಫ್ಲೈಓವರ್ ಮೇಲೆ ಕಾರು ಚಲಾಯಿಸುವಾಗ ಡಿಕೆ ಶಿವಕುಮಾರ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಡಬಲ್ ಡೆಕ್ಕರ್ ಫ್ಲೈಓವರ್ ಮೇಲೆ ಕಾರು ಚಲಾಯಿಸಿದ ಡಿಕೆ ಶಿವಕುಮಾರ್, ವಿಡಿಯೋ ನೋಡಿ
| Updated By: ಆಯೇಷಾ ಬಾನು

Updated on:Jul 18, 2024 | 8:47 AM

ಬೆಂಗಳೂರು, (ಜುಲೈ 17): ಬೆಂಗಳೂರಿನ ರಾಗಿಗುಡ್ಡದಲ್ಲಿ (Ragigudda) ದಕ್ಷಿಣ ಭಾರತದ ಅತಿ ಎತ್ತರದ ರೋಡ್-ಕಮ್-ರೈಲು ಮೇಲ್ಸೇತುವೆ (Double-Deck Flyover) ಇಂದು (ಜು.17) ಲೋಕಾರ್ಪಣೆಗೊಂಡಿದೆ. 449 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ 3.36 ಕಿಮೀ ಉದ್ದದ ಡಬ್ಬಲ್‌ ಡೆಕ್ಕರ್‌ ಫ್ಲೈ ಓವರ್‌ ಅನ್ನು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಮತ್ತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಲೋಕಾರ್ಪಣೆಗೊಳಿಸಿದರು. ಬಳಿಕ ಖುದ್ದು ಡಿಕೆ ಶಿವಕುಮಾರ್‌ ಅವರೇ ಫ್ಲೈಓವರ್‌ ರಸ್ತೆಯಲ್ಲಿ ಕಾರು ಓಡಿಸುವ ಮೂಲಕ ಪ್ರಾಯೋಗಿಕ ವಾಹನ ಸಂಚಾರಕ್ಕೆ ಚಾಲನೆ ನೀಡಿದರು. ಕಾರಿನಲ್ಲಿ ಡಿಕೆಶಿ ಜೊತೆ ಸಚಿವ ರಾಮಲಿಂಗಾ ರೆಡ್ಡಿ ಅವರೂ ಕುಳಿತಿದ್ದರು.

ಇನ್ನು ಈ ಡಬ್ಬಲ್‌ ಡೆಕ್ಕರ್‌ ಫ್ಲೈ ಓವರ್​ ಮೇಲೆ ಕಾರು ಓಡಿಸುವ ವಿಡಿಯೋವನ್ನು ಡಿಕೆ ಶಿವಕುಮಾರ್ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಬೆಂಗಳೂರಿಗರ ಬಹುದಿನಗಳ ಕನಸು ಈಗ ನನಸಾಗಿದೆ. ಆದಷ್ಟು ಬೇಗ ಡಬ್ಬಲ್‌ ಡೆಕ್ಕರ್‌ ಫ್ಲೈ ಓವರ್ ವಾಹನ ಚಾಲಕರಿಗೆ ಓಪನ್ ಆಗಲಿದೆ. ಇದೇ ಮೊದಲ ಬಾರಿಗೆ ನಗರದ ಫ್ಲೈಓವರ್ ಮೇಲೆ ಮೆಟ್ರೋ ಲೇನ್ ಹಾದು ಹೋಗಿದೆ. ಎಚ್‌ಎಸ್‌ಆರ್‌ ಲೇಔಟ್‌ ಹಾಗೂ ಹೊಸೂರ್ ಲೇಔಟನ್ನು ಇದರಿಂದ ಅಡ್ಡಿಯಿಲ್ಲದೆ ತಲುಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:20 pm, Wed, 17 July 24

Follow us