ಸುವರ್ಣಸೌಧದಿಂದಲೇ ಸಿ.ಟಿ ರವಿನ ಹೇಗೆ ಪೊಲೀಸ್ರು ಎತ್ತಾಕೊಂಡು ಹೋದ್ರು ನೋಡಿ..
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಎನ್ನಲಾದ ಕೇಸ್ನಲ್ಲಿ ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ ಬಂಧನವಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ದೂರಿನ ಆಧಾರದ ಮೇರೆಗೆ ಎಫ್ಐಆರ್ ದಾಖಲಿಸಿದ್ದು, ಬೆಳಗಾವಿ ಪೊಲೀಸ್ರು ಸಿ.ಟಿ ರವಿ ಅವರನ್ನು ಪ್ರಿವೆಂಟಿವ್ ಅರೆಸ್ಟ್ ಮಾಡಿದ್ದಾರೆ. ಹೀರೇವಾಗೇವಾಡಿ ಪೊಲೀಸರು ಸುವರ್ಣಸೌಧದಿಂದಲೇ ಸಿಟಿ ರವಿ ಅವರನ್ನು ಎತ್ತಾಕೊಂಡು ಹೋಗಿದ್ದಾರೆ.
ಬೆಳಗಾವಿ, (ಡಿಸೆಂಬರ್ 19): ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿಯನ್ನು ಪೊಲೀಸರು ಬಂಧಿಸಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಿಕೊಂಡಿರುವ ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸರು, ಸುವರ್ಣಸೌಧದಲ್ಲೇ ಸಿಟಿ ರವಿ ಅವರನ್ನು ಬಂಧಿಸಿದ್ದಾರೆ. ಬಲವಂತಾಗಿಯೇ ಪೊಲೀಸರು ಸುವರ್ಣಸೌಧದಿಂದ ಸಿಟಿ ರವಿ ಅವರನ್ನು ಎತ್ತಿಕೊಂಡು ಬಂದು ವಾಹನದಲ್ಲಿ ಕೂರಿಸಿಕೊಂಡು ಹೋಗಿದ್ದಾರೆ. ಇನ್ನು ಪೊಲೀಸರು , ಸಿಟಿ ರವಿಯನ್ನು ಹೇಗೆ ಹೊತ್ತೊಯ್ದ ಜೀಪ್ನಲ್ಲಿ ಕೂಡಿಸಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ
Latest Videos