ಸುವರ್ಣಸೌಧದಿಂದಲೇ ಸಿ.ಟಿ ರವಿನ ಹೇಗೆ ಪೊಲೀಸ್ರು ಎತ್ತಾಕೊಂಡು ಹೋದ್ರು ನೋಡಿ..

Updated on: Dec 19, 2024 | 7:52 PM

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಎನ್ನಲಾದ ಕೇಸ್​​ನಲ್ಲಿ ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ ಬಂಧನವಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ದೂರಿನ ಆಧಾರದ ಮೇರೆಗೆ ಎಫ್​ಐಆರ್​ ದಾಖಲಿಸಿದ್ದು, ಬೆಳಗಾವಿ ಪೊಲೀಸ್ರು ಸಿ.ಟಿ ರವಿ ಅವರನ್ನು ಪ್ರಿವೆಂಟಿವ್​ ಅರೆಸ್ಟ್ ಮಾಡಿದ್ದಾರೆ. ​ಹೀರೇವಾಗೇವಾಡಿ ಪೊಲೀಸರು ಸುವರ್ಣಸೌಧದಿಂದಲೇ ಸಿಟಿ ರವಿ ಅವರನ್ನು ಎತ್ತಾಕೊಂಡು ಹೋಗಿದ್ದಾರೆ.

ಬೆಳಗಾವಿ, (ಡಿಸೆಂಬರ್ 19): ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ಗೆ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿಯನ್ನು ಪೊಲೀಸರು ಬಂಧಿಸಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ದೂರಿನ ಮೇರೆಗೆ ಎಫ್​ಐಆರ್ ದಾಖಲಿಸಿಕೊಂಡಿರುವ ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸರು, ಸುವರ್ಣಸೌಧದಲ್ಲೇ ಸಿಟಿ ರವಿ ಅವರನ್ನು ಬಂಧಿಸಿದ್ದಾರೆ.​ ಬಲವಂತಾಗಿಯೇ ಪೊಲೀಸರು ಸುವರ್ಣಸೌಧದಿಂದ ಸಿಟಿ ರವಿ ಅವರನ್ನು ಎತ್ತಿಕೊಂಡು ಬಂದು ವಾಹನದಲ್ಲಿ ಕೂರಿಸಿಕೊಂಡು ಹೋಗಿದ್ದಾರೆ. ಇನ್ನು ಪೊಲೀಸರು , ಸಿಟಿ ರವಿಯನ್ನು ಹೇಗೆ ಹೊತ್ತೊಯ್ದ ಜೀಪ್​ನಲ್ಲಿ ಕೂಡಿಸಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More