Lokayukta raids: ತಹಶೀಲ್ದಾರ್ ಮನೆಯಲ್ಲಿ ಕಂತೆ-ಕಂತೆ ನಗದು ಹಣ ಪತ್ತೆ, ವಿಡಿಯೋನಲ್ಲಿ ನೋಡಿ

Updated on: Jun 28, 2023 | 9:22 AM

ಲೋಕಾಯುಕ್ತ ದಾಳಿಯಲ್ಲಿ ಬೆಂಗಳೂರಿನ ಕೆಆರ್​ ಪುರಂ ತಹಶಿಲ್ದಾರ್ ನಿವಾಸದಲ್ಲಿ ಕಂತೆ-ಕಂತೆ ನಗದು ಹಣ ಪತ್ತೆಯಾಗಿದೆ.

ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ಇಂದು(ಜೂನ್ 28) ಇಂದು ಬೆಳ್ಳಂಬೆಳಗ್ಗೆ ಕರ್ನಾಟಕದಾದ್ಯಂತ ಸರ್ಕಾರಿ ಅಧಿಕಾರಿಗಳ ನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿದ್ದಾರೆ. ದಾಳಿಯಲ್ಲಿ ಬೆಂಗಳೂರಿನ ಕೆಆರ್​ ಪುರಂ ತಹಶಿಲ್ದಾರ್ ಆಗಿರುವ ಅಜಿತ್ ಕುಮಾರ್ ರೈ ಮಾಲಾಡಿ ಮನೆಯಲ್ಲಿ ಕಂತೆ-ಕಂತೆ ನಗದು ಹಣ ಪತ್ತೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮೂಲದವರಾದ ಅಜಿತ್ ಕುಮಾರ್ ರೈ ಅವರ ಸಹಕಾರನಗರದಲ್ಲಿರುವ ನಿವಾಸದಲ್ಲಿ ಲೋಕಾಯುಕ್ತ ಅಧಿಕಾರಿಗಳಿಗೆ ನಗದು ಹಣದ ಜೊತೆಗೆ ಚಿನ್ನಾಭರಣಗಳು ಸಹ ಪತ್ತೆಯಾಗಿದ್ದು. ಅವುಗಳನ್ನ ವಶ ಪಡೆದುಕೊಂಡು ಹಣದ ಮೂಲದ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ. ಇನ್ನು ಅತ್ತ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿರುವ ಅಜಿತ್ ಕುಮಾರ್ ರೈ ಮನೆ ಮೇಲೂ ದಾಳಿಯಾಗಿದ್ದು, ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸಿದ್ದಾರೆ.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More