ಕಲಬುರಗಿ ಜಿಲ್ಲೆ ಡಿಸಿ ಕಚೇರಿಯಲ್ಲೇ ಇಲ್ಲ ಕುಡಿಯುವ ನೀರು! ಶುದ್ಧ ನೀರಿನ ಘಟಕಗಳು ಬಂದ್

Edited By:

Updated on: Apr 25, 2026 | 3:40 PM

ಕಲಬುರಗಿ ಜಿಲ್ಲಾಡಳಿತ ಭವನದಲ್ಲಿನ ಶುದ್ಧ ಕುಡಿಯುವ ನೀರಿನ ಘಟಕಗಳು ಕಾರ್ಯನಿರ್ವಹಿಸದೆ ಕಳೆದ ಎರಡು-ಮೂರು ತಿಂಗಳಿಂದ ಬಂದ್ ಆಗಿವೆ. ಇದರಿಂದ ಕಚೇರಿಗೆ ಬರುವ ಸಾವಿರಾರು ಸಾರ್ವಜನಿಕರು ಹಾಗೂ ಅಧಿಕಾರಿಗಳು ಕುಡಿಯುವ ನೀರಿಲ್ಲದೆ ಪರದಾಡುತ್ತಿದ್ದಾರೆ. ಬೇಸಿಗೆಯ ಬಿಸಿಲು ಹೆಚ್ಚಿದ್ದರೂ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಂಡಿಲ್ಲ. ಈ ನಿರ್ಲಕ್ಷ್ಯ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಕಲಬುರಗಿ, ಏಪ್ರಿಲ್ 25: ಕಲ್ಯಾಣ ಕರ್ನಾಟಕದ ಕಲಬುರಗಿ ಜಿಲ್ಲಾಡಳಿತ ಭವನದಲ್ಲಿನ ಶುದ್ಧ ಕುಡಿಯುವ ನೀರಿನ ಘಟಕಗಳು ಕಾರ್ಯನಿರ್ವಹಿಸದೆ ಬಂದ್ ಆಗಿವೆ. ಇದರಿಂದಾಗಿ ಕುಡಿಯುವ ನೀರಿನ ತೀವ್ರ ಸಮಸ್ಯೆ ಉಂಟಾಗಿದೆ. ಜಿಲ್ಲೆಯ ‘ಶಕ್ತಿ ಕೇಂದ್ರ’ ಎಂದೇ ಕರೆಯಲ್ಪಡುವ ಈ ಕಚೇರಿಯಲ್ಲಿ ಹೊರಗಡೆ ಇರುವ ಒಂದು ಹಾಗೂ ಒಳಗಡೆ ಇರುವ ಎರಡು ಶುದ್ಧ ನೀರಿನ ಘಟಕಗಳು ಸಂಪೂರ್ಣವಾಗಿ ಕೆಟ್ಟು ಹೋಗಿವೆ. ಕಳೆದ ಎರಡು-ಮೂರು ತಿಂಗಳಿಂದ ನೀರು ಪೂರೈಕೆ ಇಲ್ಲದೆ ಸಾವಿರಾರು ಸಾರ್ವಜನಿಕರು ಮತ್ತು ಅಧಿಕಾರಿಗಳು ನೀರಿಗಾಗಿ ಪರಿತಪಿಸುತ್ತಿದ್ದಾರೆ.

ಕಚೇರಿಗೆ ಬರುವ ಸಾರ್ವಜನಿಕರು ಮತ್ತು ಅಧಿಕಾರಿಗಳು ಮನೆಯಿಂದಲೇ ನೀರಿನ ಬಾಟಲಿಗಳನ್ನು ತರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ತಾಪಮಾನ ಹೆಚ್ಚಿದ್ದರೂ, ಜಿಲ್ಲೆಯ ಹಳ್ಳಿಗಳಿಗೆ ಸಮರ್ಪಕ ನೀರು ಒದಗಿಸುವ ಜವಾಬ್ದಾರಿಯಿರುವ ಜಿಲ್ಲಾಡಳಿತವೇ ತನ್ನ ಆವರಣದಲ್ಲಿ ಕುಡಿಯುವ ನೀರು ಒದಗಿಸಲು ವಿಫಲವಾಗಿದೆ. ಈ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದರೂ, ಜಿಲ್ಲಾಡಳಿತ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Apr 25, 2026 01:44 PM
Loading...
Unable to load recommendations.
Follow Us
ದತ್ತಾತ್ರೇಯ ಪಾಟೀಲ್​

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More