ಭರ್ಜರಿ ಮಳೆ: ಮನೆಗಳಿಗೆ ನುಗ್ಗಿದ ನೀರು, ಜನ ಜೀವನ ಅಸ್ತವ್ಯಸ್ತ, ಯಾವೂರಲ್ಲಿ?
[lazy-load-videos-and-sticky-control id=”UKEsYMdNWyg”] ದಾವಣಗೆರೆ: ಜಿಲ್ಲೆಯಲ್ಲಿ ಮಳೆ ಅರ್ಭಟ ಮುಂದುವರಿದಿದೆ. ಜಿಲ್ಲೆಯಾದ್ಯಂತ ಕೆರೆಕಟ್ಟೆಗಳು ತುಂಬಿರುವ ಪರಿಣಾಮ ಕೆಲ ಗ್ರಾಮದ ಮನೆಗಳಿಗೆ ನೀರು ನುಗ್ಗಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ದಾವಣಗೆರೆ ತಾಲೂಕಿನ ಹುಚ್ಚವನಹಳ್ಳಿ, ಲೋಕಿಕೆರೆ, ಯರವನಾಗತಿಹಳ್ಳಿ ಸೇರಿದಂತೆ 10ಕ್ಕೂ ಹೆಚ್ಚು ಗ್ರಾಮಗಳ ವ್ಯಾಪ್ತಿಯಲ್ಲಿ ಭರ್ಜರಿ ಮಳೆಯಾಗುತ್ತಿದೆ. ಇದರಿಂದಾಗಿ ಆ ಭಾಗದ ಕೆರೆಕಟ್ಟೆಗಳೆಲ್ಲಾ ಉಕ್ಕಿ ಹರಿಯುತ್ತಿದ್ದು, ಕೆಲವು ಗ್ರಾಮಗಳ ಮನೆಗೆ ನೀರು ನುಗ್ಗಿದೆ. ಜೊತೆಗೆ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದು,ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಳೆಯಿಂದ ಎಚ್ಚೆತ್ತುಕೊಂಡಿರುವ ಜಿಲ್ಲಾಡಳಿತ ಮಳೆ ಹಾನಿ ಸಮೀಕ್ಷೆಗೆ […]

[lazy-load-videos-and-sticky-control id=”UKEsYMdNWyg”]
ದಾವಣಗೆರೆ: ಜಿಲ್ಲೆಯಲ್ಲಿ ಮಳೆ ಅರ್ಭಟ ಮುಂದುವರಿದಿದೆ. ಜಿಲ್ಲೆಯಾದ್ಯಂತ ಕೆರೆಕಟ್ಟೆಗಳು ತುಂಬಿರುವ ಪರಿಣಾಮ ಕೆಲ ಗ್ರಾಮದ ಮನೆಗಳಿಗೆ ನೀರು ನುಗ್ಗಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ.
ದಾವಣಗೆರೆ ತಾಲೂಕಿನ ಹುಚ್ಚವನಹಳ್ಳಿ, ಲೋಕಿಕೆರೆ, ಯರವನಾಗತಿಹಳ್ಳಿ ಸೇರಿದಂತೆ 10ಕ್ಕೂ ಹೆಚ್ಚು ಗ್ರಾಮಗಳ ವ್ಯಾಪ್ತಿಯಲ್ಲಿ ಭರ್ಜರಿ ಮಳೆಯಾಗುತ್ತಿದೆ. ಇದರಿಂದಾಗಿ ಆ ಭಾಗದ ಕೆರೆಕಟ್ಟೆಗಳೆಲ್ಲಾ ಉಕ್ಕಿ ಹರಿಯುತ್ತಿದ್ದು, ಕೆಲವು ಗ್ರಾಮಗಳ ಮನೆಗೆ ನೀರು ನುಗ್ಗಿದೆ.
ಜೊತೆಗೆ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದು,ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಳೆಯಿಂದ ಎಚ್ಚೆತ್ತುಕೊಂಡಿರುವ ಜಿಲ್ಲಾಡಳಿತ ಮಳೆ ಹಾನಿ ಸಮೀಕ್ಷೆಗೆ ಮುಂದಾಗಿದೆ.
Published On - 10:29 am, Thu, 10 September 20