AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಾವರಿ ಪೈಪ್‌ಲೈನ್ ಒಡೆದು ಆಕಾಶದೆತ್ತರಕ್ಕೆ ಚಿಮ್ಮಿದ ನೀರು: ಓಡೋಡಿ ಬಂದ ಗ್ರಾಮಸ್ಥರು

ನೀರಾವರಿ ಪೈಪ್‌ಲೈನ್ ಒಡೆದು ಆಕಾಶದೆತ್ತರಕ್ಕೆ ಚಿಮ್ಮಿದ ನೀರು: ಓಡೋಡಿ ಬಂದ ಗ್ರಾಮಸ್ಥರು

ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Jul 17, 2026 | 9:29 PM

Share

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕವಟಗಿ ಗ್ರಾಮದಲ್ಲಿ ಬಬಲೇಶ್ವರ-ತುಬಚಿ ಏತ ನೀರಾವರಿ ಯೋಜನೆಯ ಮುಖ್ಯ ಪೈಪ್‌ಲೈನ್ ಒಡೆದು ಆಕಾಶದೆತ್ತರಕ್ಕೆ ನೀರು ಚಿಮ್ಮಿದೆ ಘಟನೆ ನಡೆದಿದೆ. ಈ ಘಟನೆ ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯದಿಂದ ನಡೆದಿದೆ ಎಂದು ಆರೋಪಿಸಿ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಾಗಲಕೋಟೆ, ಜುಲೈ 17: ಜಿಲ್ಲೆಯ ಜಮಖಂಡಿ ತಾಲೂಕಿನ ಕವಟಗಿ ಗ್ರಾಮದಲ್ಲಿ ಬಬಲೇಶ್ವರ-ತುಬಚಿ ಏತನೀರಾವರಿ ಯೋಜನೆಯ ಮುಖ್ಯ ಪೈಪ್‌ಲೈನ್ ಒಡೆದ ಪರಿಣಾಮ ಗಗನದೆತ್ತರಕ್ಕೆ ನೀರು ಚಿಮ್ಮಿದ ಘಟನೆ ನಡೆದಿದೆ. ಪೈಪ್‌ಲೈನ್ ಸಂಪೂರ್ಣವಾಗಿ ಹಾನಿಗೊಳಗಾದ ಪರಿಣಾಮ ಬೃಹತ್ ಪ್ರಮಾಣದಲ್ಲಿ ನೀರು ಆಕಾಶದತ್ತ ಚಿಮ್ಮಿದೆ. ಸುತ್ತಲಿನ ಹೊಲಗದ್ದೆಗಳು ಹಾಗೂ ರಸ್ತೆಗೆ ನೀರು ಹರಿದಿದೆ. ಇದರಿಂದಾಗಿ ಅಪಾರ ಪ್ರಮಾಣದ ನೀರು ಪೋಲಾಗಿದೆ. ರೈತರ ಬೆಳೆಗಳಿಗೆ ಹಾನಿಯಾಗುವ ಭೀತಿ ಎದುರಾಗಿದೆ. ಇನ್ನು ಆಕಾಶದೆತ್ತರಕ್ಕೆ ಚಿಮ್ಮಿದ ನೀರಿನ ದೃಶ್ಯವು ನೋಡುಗರಲ್ಲಿ ತೀವ್ರ ಅಚ್ಚರಿ ಹಾಗೂ ಕೌತುಕವನ್ನು ಮೂಡಿಸಿದೆ. ಘಟನೆಯಿಂದಾಗಿ ಸ್ಥಳೀಯ ನಿವಾಸಿಗಳು ಹಾಗೂ ರೈತರು ಆತಂಕಗೊಂಡಿದ್ದು, ಸಂಬಂಧಪಟ್ಟ ನೀರಾವರಿ ಇಲಾಖೆಯ ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಆಗಮಿಸಿ, ಪೈಪ್‌ಲೈನ್ ದುರಸ್ತಿಗೊಳಿಸಿ ನೀರು ಪೋಲಾಗುವುದನ್ನು ತಡೆಯಬೇಕೆಂದು ಒತ್ತಾಯಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Jul 17, 2026 09:27 PM

Follow Us
ರವಿ ಹೆಚ್ ಮೂಕಿ, ಕಲಘಟಗಿ
ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More