AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವುದೇ ಕ್ಷಣದಲ್ಲಿ ಕೆಆರ್​ಎಸ್ ಡ್ಯಾಂನಿಂದ ಕಾವೇರಿ ನದಿಗೆ ನೀರು ಬಿಡುಗಡೆ: ಜನರಿಗೆ ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚನೆ

ಯಾವುದೇ ಕ್ಷಣದಲ್ಲಿ ಕೆಆರ್​ಎಸ್ ಡ್ಯಾಂನಿಂದ ಕಾವೇರಿ ನದಿಗೆ ನೀರು ಬಿಡುಗಡೆ: ಜನರಿಗೆ ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚನೆ

ದಿಲೀಪ್​, ಚೌಡಹಳ್ಳಿ
| Updated By: Ganapathi Sharma|

Updated on: Jun 20, 2025 | 11:54 AM

Share

ಈ ವರ್ಷ ಮುಂಗಾರು ಮಳೆಯ ಅಬ್ಬರ ಅವಧಿಗೂ ಮುನ್ನವೇ ಕೆಆರ್​​ಎಸ್ ಡ್ಯಾಂ ಭರ್ತಿಯಾಗುವತ್ತ ಕೊಮಡೊಯ್ದಿದೆ. ಪರಿಣಾಮವಾಗಿ ಡ್ಯಾಂ ಭರ್ತಿಯಾಗಲು ಇನ್ನು 7 ಅಡಿ ಅಷ್ಟೇ ಬಾಕಿ ಇದೆ. ಹೀಗಾಗಿ ಡ್ಯಾಂನಿಂದ ನದಿಗೆ ನೀರು ಬಿಡುವ ಸಂದರ್ಭ ಬರುವ ಮುನ್ಸೂಚನೆ ಇದ್ದು, ಕಾವೇರಿ ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಎಚ್ಚರಿಕೆ ನೀಡಲಾಗಿದೆ.

ಶ್ರೀರಂಗಪಟ್ಟಣ, ಜೂನ್ 20: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಯಾವುದೇ ಕ್ಷಣದಲ್ಲಿ ಕೆಆರ್​ಎಸ್ ಡ್ಯಾಂನಿಂದ ನೀರು ಬಿಡುಗಡೆ ಮಾಡುವ ಸಾಧ್ಯತೆ ಇದೆ. ನದಿ ಪಾತ್ರದ ಜನರು ಸುರಕ್ಷಿತ ಸ್ಥಳಕ್ಕೆ ತೆರಳಬೇಕು ಎಂದು ಶ್ರೀರಂಗಪಟ್ಟಣ ತಹಶೀಲ್ದಾರ್ ಪತ್ರ ಬರೆದು ಮನವಿ ಮಾಡಿದ್ದಾರೆ. ಸದ್ಯ ಕೆಆರ್​ಎಸ್ ಡ್ಯಾಂ 117.40 ಅಡಿ ಭರ್ತಿಯಾಗಿದೆ. ಡ್ಯಾಂ ಸಂಪೂರ್ಣ ಭರ್ತಿಯಾಗಲು ಇನ್ನು 7 ಅಡಿ ಮಾತ್ರ ಬಾಕಿ ಇದೆ. ಜಲಾಶಯಕ್ಕೆ 23,473 ಕ್ಯೂಸೆಕ್ ನೀರು ಒಳಹರಿವು ಇದ್ದು, ಯಾವುದೇ ಕ್ಷಣದಲ್ಲಿ ಕಾವೇರಿ ನದಿಗೆ ನೀರು ಬಿಡುಗಡೆ ಮಾಡಬೇಕಾಗಿ ಬರಬಹುದು. ಹೀಗಾಗಿ ತಹಶೀಲ್ದಾರ್ ಪತ್ರದ ಮೂಲಕ ಎಚ್ಚರಿಕೆ ಸಂದೇಶ ಬಿಡುಗಡೆ ಮಾಡಿದ್ದಾರೆ.

2025-26 ನೇ ಸಾಲಿನಲ್ಲಿ ಮುಂಗಾರು ಮಳೆಯಿಂದ ಕೃಷ್ಣರಾಜ ಸಾಗರ ಡ್ಯಾಂನಲ್ಲಿ ನೀರು ಹೆಚ್ಚಾಗುತ್ತಿರುವ ಕಾರಣ ಕಾವೇರಿ ನದಿಯ ಜಲನಯನ ಪ್ರದೇಶದಲ್ಲಿನ ಜನರಿಗೆ ಮುನ್ನೆಚ್ಚರಿಕೆ ಕ್ರಮವಹಿಸುವ ಬಗ್ಗೆ ಮಂಡ್ಯ ಜಿಲ್ಲಾಧಿಕಾರಿಗಳ ದೂರವಾಣಿ ಸಂದೇಶದ ಮೇರೆಗೆ ಈ ಪತ್ರ ಬರೆಯಲಾಗಿದೆ ಎಂದು ತಹಶೀಲ್ದಾರ್ ತಿಳಿಸಿದ್ದಾರೆ.

ಎಚ್ಚರಿಕೆ ಸಂದೇಶದಲ್ಲೇನಿದೆ?

ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿ 2025-26 ನೇ ಸಾಲಿನಲ್ಲಿ ಮುಂಗಾರು ಮಳೆಯಿಂದ ಕೃಷ್ಣರಾಜ ಸಾಗರ ಡ್ಯಾಂನಲ್ಲಿ ನೀರು ಹೆಚ್ಚಾಗಿರುತ್ತಾದೆ. ಅದ್ದರಿಂದ ಕೆಆರ್​​ಎಸ್​​ ಡ್ಯಾಂನಿಂದ ನೀರನ್ನು ಯಾವುದೇ ಸಂದರ್ಭದಲ್ಲಾದರೂ ಹೊರಬಿಡುವ ಸಾಧ್ಯತೆ ಇರುವುದರಿಂದ ಕಾವೇರಿ ನದಿ ಪಾತ್ರ ಅಚ್ಚುಕಟ್ಟು ಪ್ರದೇಶದಲ್ಲಿ ವಾಸವಿರುವ ಜನ-ಜನುವಾರು ಹಾಗೂ ಇತರೆ ಬೆಲೆ ಬಾಳುವ ವಸ್ತುಗಳಿಗೆ ಹಾನಿಯಾಗುವ ಸಂಭವವಿರುವುದರಿಂದ ಮುನ್ನೆಚ್ಚರಿಕೆ ಕ್ರಮ ವಹಿಸಲು ಈ ಮೂಲಕ ತಿಳಿಯಪಡಿಸಲಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ