ತುಂಗಭದ್ರಾ ಡ್ಯಾಂನಿಂದ ನದಿಗೆ ನೀರು: ಐತಿಹಾಸಿಕ ಹಂಪಿಯ ಸ್ಮಾರಕಗಳು ಮುಳುಗಡೆ

| Updated By: Ganapathi Sharma

Updated on: Jul 26, 2024 | 11:52 AM

ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿಯೂ ಮಳೆಯ ಅಬ್ಬರ ಜೋರಾಗಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ತುಂಗಭದ್ರಾ ಡ್ಯಾನಿಂದ ನದಿಗೆ ನೀರು ಬಿಡಲಾಗುತ್ತಿದ್ದು, ಹಂಪಿಯ ಐತಿಹಾಸಿಕ ಸ್ಮಾರಕಗಳು ಮುಳುಗಡೆಯಾಗಿವೆ. ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಪ್ರವಾಸಿಗರಿಗೆ ಎಚ್ಚರಿಕೆ ನೀಡಲಾಗಿದೆ. ಐತಿಹಾಸಿಕ ಸ್ಮಾರಕಗಳು ಮುಳುಗಡೆ ಸಂಬಂಧಿತ ವಿಡಿಯೋ ಇಲ್ಲಿದೆ.

ವಿಜಯನಗರ, ಜುಲೈ 26: ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿರುವ ಕಾರಣ ತುಂಗಭದ್ರಾ ಜಲಾಶಯದಿಂದ ನದಿಗೆ ನೀರು ಬಿಡುಗಡೆ ಮಾಡಲಾಗಿದೆ. ಹಿಗಾಗಿ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಐತಿಹಾಸಿಕ ಹಂಪಿಯ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಐತಿಹಾಸಿಕ ಸ್ಮಾರಕಗಳು ಮುಳುಗಡೆಯಾಗಿವೆ. ಹಂಪಿಯ ವಿಧಿ – ವಿಧಾನ ಮಂಟಪಗಳು, ಸ್ನಾನಘಟ್ಟಗಳು ಮುಳುಗಡೆಯಾಗಿವೆ.

ಪುರಂದರದಾಸ ಮಂಟಪ ಕೂಡ ಮುಳುಗಡೆಯಾಗಿದೆ. ಕೋದಂಡರಾಮ ದೇಗುಲದ ಬಳಿ ನದಿನೀರು ಹರಿದುಬಂದಿದೆ. ತುಂಗಭದ್ರಾ ಜಲಾಶಯದಿಂದ 30 ಕ್ರಸ್ಟ್ ಗೇಟ್​​​ಗಳ ಮೂಲಕ ನದಿಗೆ ನೀರು ಹರಿಸಲಾಗಿದೆ. ಪರಿಣಾಮವಾಗಿ ಹಂಪಿಯಲ್ಲಿ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದೆ. ನದಿಗೆ ಇಳಿಯದಂತೆ ಪ್ರವಾಸಿಗರಿಗೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಆಲಮಟ್ಟಿ ಭರ್ತಿಗೆ 2 ಅಡಿ ಬಾಕಿ, ರಾಜ್ಯದ ಜಲಾಶಯಗಳ ನೀರಿನ ಮಟ್ಟ ವಿವರ ಇಲ್ಲಿದೆ

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿಯೂ ಸದ್ಯ ಮಳೆಯ ಅಬ್ಬರ ಜೋರಾಗಿದೆ. ಪಶ್ಚಿಮ ಘಟ್ಟ ಸಾಲುಗಳಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಬೆಳಗಾವಿ ಜಿಲ್ಲೆಯ ನದಿಗಳೂ ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ