Uttara Kannada: ಕದ್ರಾ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ಕಾಳಿ ನದಿಗೆ ನೀರು ಬಿಡುಗಡೆ, ನದಿಪಾತ್ರದ ಜನರಿಗೆ ಎಚ್ಚರಿಕೆ ನೀಡಿದ ಜಿಲ್ಲಾಡಳಿತ
ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಾನ್ಸೂನ್ ವಿಳಂಬಗೊಂಡರೂ ನಂತರದ ದಿನಗಳಲ್ಲಿ ಮಳೆಯ ಆರ್ಭಟ ಹೆಚ್ಚಿದೆ. ಹಾಗಾಗಿ, ನದಿಗಳು ಉಕ್ಕಿ ಹರಿಯುತ್ತಿವೆ.
ಉತ್ತರ ಕನ್ನಡ: ಕಳೆದ ಕೆಲ ದಿನಗಳಿಂದ ಜಿಲ್ಲೆಯಾದ್ಯಂತ ಮಳೆ ಧಾರಾಕಾರವಾಗಿ ಸುರಿಯುತ್ತಿರುವುದರಿಂದ ಕಾರವಾರ ತಾಲ್ಲೂಕಿಲ್ಲಿನರುವ ಕದ್ರಾ ಜಲಾಶಯಕ್ಕೆ (Kadra Reservoir ) ಒಳ ಹರಿವು (inflow) ಅಪಾರ ಪ್ರಮಾಣದಲ್ಲಿ ಹೆಚ್ಚಿದೆ. ಆ ಹಿನ್ನೆಲೆಯಲ್ಲೇ ಜಲಾಶಯ 5,000 ಕ್ಯೂಸೆಕ್ಸ್ ನೀರನ್ನು ಕಾಳಿನದಿಗೆ (River Kali) ಬಿಡಲಾಗಿದೆ. ನದಿಪಾತ್ರದ ಜನ ಎಚ್ಚರದಿಂದ ಇರಲು ಉತ್ತರ ಕನ್ನಡ ಜಿಲ್ಲಾಡಳಿತ ಸೂಚನೆ ನೀಡಿದೆ. ಜಲಾಶಯದಿಂದ ನೀರು ಹರಿದು ಬರುವ ಕಾರಣ ನದಿ ಉಕ್ಕಿ ಹರಿಯುವುದು ನಿಶ್ಚಿತ ಮತ್ತು ನದಿ ತೀರಕ್ಕಿರುವ ಗ್ರಾಮಗಳಿಗೆ ನೀರಿ ನುಗ್ಗುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ. ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಾನ್ಸೂನ್ ವಿಳಂಬಗೊಂಡರೂ ನಂತರದ ದಿನಗಳಲ್ಲಿ ಮಳೆಯ ಆರ್ಭಟ ಹೆಚ್ಚಿದೆ. ಹಾಗಾಗಿ, ನದಿಗಳು ಉಕ್ಕಿ ಹರಿಯುತ್ತಿವೆ ಮತ್ತು ಜಲಾಶಯಗಳಲ್ಲಿ ಒಳಹರಿವು ಹೆಚ್ಚಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ