ಒಂದೆಡೆ ಬಿಸಿಲ ಬೇಗೆ ಜೋರಾದ್ರೆ ಮತ್ತೊಂದೆಡೆ ನೀರಿಗಾಗಿ ಹಾಹಾಕಾರ: ಬೆಂಗಳೂರಿನ ವಿವಿಧೆಡೆ ಕುಡಿಯುವ ನೀರಿದ ದರ ಏರಿಕೆ

Updated on: Apr 17, 2026 | 9:02 AM

ಕರ್ನಾಟಕವು ತೀವ್ರ ಬಿಸಿಲ ಬೇಗೆ ಮತ್ತು ನೀರಿನ ಅಭಾವದ ಡಬಲ್ ಶಾಕ್ ಎದುರಿಸುತ್ತಿದೆ. ಬೆಂಗಳೂರು, ನೆಲಮಂಗಲ, ಗದಗ, ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜನರು ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆ. ಶುದ್ಧ ಕುಡಿಯುವ ನೀರಿನ ಬೆಲೆ ಏರಿಕೆ, ನೀರಿನ ಅಸಮರ್ಪಕ ಪೂರೈಕೆ, ಮತ್ತು ನದಿಗಳ ನೀರಿನ ಮಟ್ಟ ಕುಸಿತ ಗಂಭೀರ ಸಮಸ್ಯೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸಿಗಳೊಂದಿಗೆ ಸಭೆ ನಡೆಸಿ, ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಲು ಸೂಚಿಸಿದ್ದಾರೆ.

ಬೆಂಗಳೂರು, ಏಪ್ರಿಲ್ 17: ಕರ್ನಾಟಕ ಈಗ ತೀವ್ರ ಬಿಸಿಲ ಬೇಗೆಯೊಂದಿಗೆ ಕುಡಿಯುವ ನೀರಿನ ಭೀಕರ ಬಿಕ್ಕಟ್ಟನ್ನು ಎದುರಿಸುತ್ತಿದೆ. ಹಲವು ಜಿಲ್ಲೆಗಳಲ್ಲಿ ಜನರಿಗೆ ಡಬಲ್ ಶಾಕ್ ಎದುರಾಗಿದ್ದು, ನೀರಿಗಾಗಿ ತೀವ್ರ ಹಾಹಾಕಾರ ಶುರುವಾಗಿದೆ. ಬೆಂಗಳೂರಿನ ಲಗ್ಗೆರೆ ಪ್ರದೇಶದಲ್ಲಿ ಶುದ್ಧ ಕುಡಿಯುವ ನೀರಿನ ಬೆಲೆ ಏರಿಕೆಯಾಗಿದ್ದು, ಜನರು ದೂರದ ಪ್ರದೇಶಗಳಿಂದ ನೀರು ತರಲು ಪರದಾಡುತ್ತಿದ್ದಾರೆ. ಪ್ರತಿ ಮೂರು ದಿನಗಳಿಗೊಮ್ಮೆ ಕೇವಲ ಒಂದು ಅಥವಾ ಎರಡು ಗಂಟೆಗಳ ಕಾಲ ನೀರು ಪೂರೈಕೆಯಾಗುತ್ತಿದೆ.

ನೆಲಮಂಗಲದಲ್ಲಿ ನೀರಿನ ಅಸಮರ್ಪಕ ವಿತರಣೆ ಮತ್ತು ರಾಜಕೀಯದ ವಿರುದ್ಧ ಪ್ರತಿಭಟನೆಗಳು ನಡೆದಿವೆ. ಜಕ್ಕಸಂದ್ರ ವಾರ್ಡ್‌ನಲ್ಲಿ ಹಣ ಕೊಟ್ಟವರಿಗೆ ಮಾತ್ರ ನೀರು ಪೂರೈಕೆ ಮಾಡಲಾಗುತ್ತಿದೆ ಎಂಬ ಆರೋಪಗಳೂ ಕೇಳಿಬಂದಿವೆ. ಗದಗ ಜಿಲ್ಲೆಯ ರೋಣ ತಾಲೂಕಿನಲ್ಲಿ ಜನರು ಚರಂಡಿ ಪೈಪ್‌ಗಳಿಂದ ನೀರು ಹಿಡಿಯುವ ದುಸ್ಥಿತಿ ಎದುರಿಸುತ್ತಿದ್ದಾರೆ. ಉಡುಪಿ ನಗರ ಮತ್ತು ಗ್ರಾಮೀಣ ಪ್ರದೇಶಗಳಿಗೆ ಜೀವಜಲವಾಗಿದ್ದ ಸ್ವರ್ಣ ನದಿಯ ನೀರಿನ ಮಟ್ಟ ಕಳೆದ ವರ್ಷಕ್ಕಿಂತ ಒಂದು ಮೀಟರ್‌ನಷ್ಟು ಕುಸಿದಿದೆ.

ಏತನ್ಮಧ್ಯೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಡಿಸಿಗಳ ಸಭೆಯಲ್ಲಿ, ಅಣೆಕಟ್ಟುಗಳಲ್ಲಿನ ನೀರಿನ ಸಂಗ್ರಹದ ಬಗ್ಗೆ ಮಾಹಿತಿ ಪಡೆಯಲಾಯಿತು. ನೀರಾವರಿಗಿಂತ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡುವಂತೆ ಮುಖ್ಯಮಂತ್ರಿಗಳು ಡಿಸಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಕಡೆ ಮುಂಗಾರು ಕಡಿಮೆಯಾಗುವ ಆತಂಕವಿದ್ದು, 213 ತಾಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದೆ ಎಂದು ಅಂದಾಜಿಸಲಾಗಿದೆ. ಕುಡಿಯುವ ನೀರಿಗೆ ತೊಂದರೆಯಾದರೆ ಡಿಸಿಗಳೇ ನೇರ ಹೊಣೆ ಎಂದು ಸಿಎಂ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More