ಮುಖ್ಯಮಂತ್ರಿಗಳ ಗೃಹಕಚೇರಿಗೂ ತಟ್ಟಿದ ನೀರಿನ ಬಿಸಿ; ಟ್ಯಾಂಕರ್ನಲ್ಲಿ ನೀರು ಪೂರೈಕೆ
ಬೆಂಗಳೂರಿನ ಹಲವೆಡೆ ನೀರಿನ ಸಮಸ್ಯೆ ಎದುರಾಗಿದೆ. ಹನಿ ನೀರಿಗೂ ಜನ ಪರದಾಡುವಂತಹ ಸ್ಥಿತಿ ಇದೆ. ಅದರಲ್ಲೂ ಮುಖ್ಯಮಂತ್ರಿಗಳ ಗೃಹಕಚೇರಿಗೂ ನೀರಿನ ಸಮಸ್ಯೆ ಎದುರಾಗಿದೆ. ಸಿಎಂ ಗೃಹಕಚೇರಿ ಕೃಷ್ಣಾಗೆ BWSSBಯ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗಿದೆ.
ಬೆಂಗಳೂರು, ಮಾರ್ಚ್.05: ಈ ಬಾರಿ ರಾಜ್ಯದಲ್ಲಿ ಬರಗಾಲ ಎದುರಾಗಿದೆ. ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳಿಗೆ ನೀರಿಲ್ಲ. ಕುಡಿಯೋ ನೀರಿಗೂ ಆಹಾಕಾರ ಎದುರಾಗಿದೆ. ಹೀಗಾಗಿ ರಾಜ್ಯದಲ್ಲಿನ ಬರ ನಿರ್ವಹಣೆ ಪರಿಶೀಲನೆ ಕುರಿತು ಇಂದು ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಇದು ಒಂದು ಕಡೆಯಾದ್ರೆ ಮತ್ತೊಂದು ಕಡೆ ಸ್ವತಃ ಮುಖ್ಯಮಂತ್ರಿಗಳ ಗೃಹಕಚೇರಿಗೂ ನೀರಿನ ಬಿಸಿ ತಟ್ಟಿದೆ. ಸಿಎಂ ಗೃಹಕಚೇರಿ ಕೃಷ್ಣಾಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ನೀರಿನ ಬವಣೆ ಹೆಚ್ಚಾದ ಬೆನ್ನಲ್ಲೇ ಕುಮಾರಕೃಪಾ ರಸ್ತೆಯಲ್ಲಿರುವ ಸಿಎಂ ಗೃಹಕಚೇರಿಯಲ್ಲೂ ನೀರಿನ ಸಮಸ್ಯೆ ಎದುರಾಗಿದ್ದು ಜಲಮಂಡಳಿ ಟ್ಯಾಂಕರ್ನಲ್ಲಿ ನೀರು ಪೂರೈಕೆ ಮಾಡಲಾಗಿದೆ. ಬರ ನಿರ್ವಹಣೆ ಸಭೆಗೂ ಮುನ್ನ ಟ್ಯಾಂಕರ್ನಲ್ಲಿ ನೀರು ಪೂರೈಕೆ ಮಾಡಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
