ಭಾರಿ ಮಳೆಯಿಂದ ದೆಹಲಿ ವಿಮಾನ ನಿಲ್ದಾಣ ಜಲಾವೃತ; ಪ್ರಯಾಣಿಕರ ಪರದಾಟ
ದೆಹಲಿಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಇಂದು ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಜಲಾವೃತವಾಗಿದೆ. ವಿಮಾನ ನಿಲ್ದಾಣದೊಳಗೆ ನುಗ್ಗಿದ ನೀರನ್ನು ಸ್ವಚ್ಛಗೊಳಿಸಲು ಸಿಬ್ಬಂದಿ ಹರಸಾಹಸ ಪಟ್ಟರು. ಮೊಣಕಾಲು ಎತ್ತರಕ್ಕೆ ನಿಂತಿದ್ದ ಮಳೆನೀರಿನಿಂದ ವಿಮಾನ ನಿಲ್ದಾಣದ ಒಳಗಿದ್ದ ಪ್ರಯಾಣಿಕರು ಕೂಡ ಪರದಾಡುವಂತಾಯಿತು. ದೆಹಲಿಯಲ್ಲಿ ಸುರಿದ ಧಾರಾಕಾರ ಮಳೆ ವಿಮಾನ ಸಂಚಾರದ ಮೇಲೂ ಗಂಭೀರ ಪರಿಣಾಮ ಬೀರಿದ್ದು, ಅಹಮದಾಬಾದ್, ಮುಂಬೈ ಮತ್ತು ಪೋರ್ಟ್ ಬ್ಲೇರ್ ಸೇರಿದಂತೆ ವಿವಿಧ ನಗರಗಳಿಂದ ದೆಹಲಿಗೆ ಆಗಮಿಸಬೇಕಿದ್ದ ಹಲವು ವಿಮಾನಗಳ ಸಂಚಾರ ವಿಳಂಬವಾಗಿದೆ.
ನವದೆಹಲಿ, ಸೆಪ್ಟೆಂಬರ್ 4: ದೆಹಲಿಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಇಂದು ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಜಲಾವೃತವಾಗಿದೆ. ವಿಮಾನ ನಿಲ್ದಾಣದೊಳಗೆ ನುಗ್ಗಿದ ನೀರನ್ನು ಸ್ವಚ್ಛಗೊಳಿಸಲು ಸಿಬ್ಬಂದಿ ಹರಸಾಹಸ ಪಟ್ಟರು. ಮೊಣಕಾಲು ಎತ್ತರಕ್ಕೆ ನಿಂತಿದ್ದ ಮಳೆನೀರಿನಿಂದ ವಿಮಾನ ನಿಲ್ದಾಣದ ಒಳಗಿದ್ದ ಪ್ರಯಾಣಿಕರು ಕೂಡ ಪರದಾಡುವಂತಾಯಿತು. ದೆಹಲಿಯಲ್ಲಿ ಸುರಿದ ಧಾರಾಕಾರ ಮಳೆ ವಿಮಾನ ಸಂಚಾರದ ಮೇಲೂ ಗಂಭೀರ ಪರಿಣಾಮ ಬೀರಿದ್ದು, ಅಹಮದಾಬಾದ್, ಮುಂಬೈ ಮತ್ತು ಪೋರ್ಟ್ ಬ್ಲೇರ್ ಸೇರಿದಂತೆ ವಿವಿಧ ನಗರಗಳಿಂದ ದೆಹಲಿಗೆ ಆಗಮಿಸಬೇಕಿದ್ದ ಹಲವು ವಿಮಾನಗಳ ಸಂಚಾರ ವಿಳಂಬವಾಗಿದೆ. ದೆಹಲಿಯಲ್ಲಿ ಭಾರೀ ಮಳೆಯಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Sep 04, 2026 06:45 PM
Follow Us
Latest Videos

