ರಾಜ್ಯದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ, ಮುಂದಿನ ಚುನಾವಣೆಯಲ್ಲಿ ಬಿಜೆಪಿಯ ಸೋಲು ಶತಸಿದ್ಧ: ಸಿದ್ದರಾಮಯ್ಯ

ರಾಜ್ಯದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ, ಮುಂದಿನ ಚುನಾವಣೆಯಲ್ಲಿ ಬಿಜೆಪಿಯ ಸೋಲು ಶತಸಿದ್ಧ: ಸಿದ್ದರಾಮಯ್ಯ

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Aug 15, 2022 | 4:56 PM

ರಾಜ್ಯದಲ್ಲಿ ಈಗಾಗಲೇ ಬದಲಾವಣೆಯ ಗಾಳಿ ಬೀಸುತ್ತಿದೆ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಸೋತು ಕಾಂಗ್ರೆಸ್ ಅಧಿಕಾರಕ್ಕೆ ಬರೋದು ಶತಸಿದ್ಧ ಎಂದು ಸಿದ್ದರಾಮಯ್ಯ ಹೇಳಿದರು.

Bengaluru:  ಸೋಮವಾರ ಕಾಂಗ್ರೆಸ್ ಪಕ್ಷ ಬೆಂಗಳೂರಲ್ಲಿ ಹಮ್ಮಿಕೊಂಡಿದ್ದ ಫ್ರೀಡಂ ಮಾರ್ಚ್ (Freedom March) ನೇತೃತ್ವ ವಹಿಸಿದ್ದ ಸಿದ್ದರಾಮಯ್ಯನವರು (Siddaramaiah) ಟಿವಿ9 ಕನ್ನಡ ವಾಹಿನಿಯ ವರದಿಗಾರನೊಂದಿಗೆ ಮಾತಾಡಿ, ಈ ಜಾಥಾದ ಮೂಲಕ ಸಾಮರಸ್ಯ ಮತ್ತು ಸಹಬಾಳ್ವೆಯ ಸಂದೇಶವನ್ನು ತಮ್ಮ ಪಕ್ಷ ನೀಡಲು ಬಯಸುತ್ತದೆ ಎಂದರು. ದೇಶ ಒಗ್ಗಟ್ಟಾಗಿರಬೇಕು, ಸಂವಿಧಾನ ಮತ್ತು ಪ್ರಜಾಪ್ರಭುತ್ವ (democracy) ಉಳಿಯಬೇಕು ಎಂದು ಹೇಳಿದ ಮಾಜಿ ಮುಖ್ಯಮಂತ್ರಿಗಳು ರಾಜ್ಯದಲ್ಲಿ ಈಗಾಗಲೇ ಬದಲಾವಣೆಯ ಗಾಳಿ ಬೀಸುತ್ತಿದೆ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಸೋತು ಕಾಂಗ್ರೆಸ್ ಅಧಿಕಾರಕ್ಕೆ ಬರೋದು ಶತಸಿದ್ಧ ಎಂದರು.