AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!

ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!

ರಾಮ್​, ಮೈಸೂರು
| Edited By: |

Updated on: Jul 08, 2026 | 2:07 PM

Share

Wayanad Landslide: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಮೂವರು ಸಾವನ್ನಪ್ಪಿದ್ದು, ಐವರು ನಾಪತ್ತೆಯಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಭೂಕುಸಿತದ ಭಯಾನಕ ವಿಡಿಯೋವೊಂದು ವೈರಲ್ ಆಗಿದ್ದು, ಅದರಲ್ಲಿ ಕಾಣಿಸಿದ ಟ್ಯಾಂಕರ್ ಕರ್ನಾಟಕ ನೋಂದಣಿಯ ದಿಲೀಪ್ ಬಿಲ್ಡ್‌ಕಾನ್ ಸಂಸ್ಥೆಗೆ ಸೇರಿದ್ದು ಎಂಬುದು ತಿಳಿದುಬಂದಿದೆ.

ವಯನಾಡ್, ಜುಲೈ 8: ಕೇರಳದ ವಯನಾಡು ಜಿಲ್ಲೆಯ ಕಲ್ಲಾಡಿಯಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಮೂವರು ಸಾವನ್ನಪ್ಪಿದ್ದು, ಐವರು ನಾಪತ್ತೆಯಾಗಿದ್ದಾರೆ. ಎನ್​​ಡಿಆರ್​​ಎಫ್ ತಂಡವು ಕಳೆದ 25 ಗಂಟೆಗಳಿಂದ ನಿರಂತರ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ದುರಂತದ ಸಂದರ್ಭ ಸ್ಥಳದಲ್ಲಿ ಕಾಣಿಸಿದ, ವೈರಲ್ ಆದ ವಿಡಿಯೋಗಳಲ್ಲಿದ್ದ ಟ್ಯಾಂಕರ್ ಕರ್ನಾಟಕ ನೋಂದಣಿಯದ್ದು ಎಂಬುದು ಗೊತ್ತಾಗಿದೆ. ರಾಮನಗರ ಜಿಲ್ಲೆಯ ಆರ್​ಟಿಒ (KA 42, B 9671) ನೋಂದಣಿಯ ದಿಲೀಪ್ ಬಿಲ್ಡ್‌ಕಾನ್ ಲಿಮಿಟೆಡ್‌ಗೆ ಸೇರಿದ ಈ ನೀರಿನ ಟ್ಯಾಂಕರ್, ಸುರಂಗ ಕಾಮಗಾರಿ ಸ್ಥಳಕ್ಕೆ ನೀರು ಪೂರೈಸಲು ಹೋಗುತ್ತಿತ್ತು. ಚಾಲಕ ಪರಿಸ್ಥಿತಿಯ ಬಗ್ಗೆ ಗೊಂದಲದಲ್ಲಿದ್ದಾಗ, ರಭಸವಾಗಿ ಬಂದ ಮಳೆ ನೀರು ಮತ್ತು ಭೂಕುಸಿತದ ಕೆಸರು ಮಿಶ್ರಿತ ಪ್ರವಾಹಕ್ಕೆ ಟ್ಯಾಂಕರ್ ಕೊಚ್ಚಿಕೊಂಡು ಬಂದು, ಅದೃಷ್ಟವಶಾತ್ ಅಪಾಯದಿಂದ ಬಚಾವಾಗಿದೆ. ಟ್ಯಾಂಕರ್‌ನಲ್ಲಿದ್ದ ಚಾಲಕ ಸುರಕ್ಷಿತವಾಗಿದ್ದು, ಘಟನೆಗೆ ಮುನ್ನ ಟ್ಯಾಂಕರ್ ಮುಂಭಾಗದಲ್ಲಿ ಸಿಲುಕಿದ್ದ ದಂಪತಿಗಳು ಸಹ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಘಟನೆಯಲ್ಲಿ ನಾಪತ್ತೆಯಾದವರ ಪತ್ತೆಗಾಗಿ ಶೋಧ ಕಾರ್ಯ ಮುಂದುವರೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಮ್​, ಮೈಸೂರು
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More