ಭರ್ತಿಯತ್ತ ಕಬಿನಿ ಜಲಾಶಯ, 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

Edited By:

Updated on: Aug 01, 2026 | 4:04 PM

ವಯನಾಡಿನಲ್ಲಿ ನಿರಂತರ ಮಳೆಯಿಂದಾಗಿ ಕಬಿನಿ ಜಲಾಶಯ ಭರ್ತಿಯಾಗಿದ್ದು, 10,000 ಕ್ಯೂಸೆಕ್ ನೀರನ್ನು ಕಪಿಲಾ ನದಿಗೆ ಬಿಡಲಾಗಿದೆ. ಮೈಸೂರು ಜಿಲ್ಲೆಯ ನದಿ ಪಾತ್ರದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಎಚ್ಚರಿಕೆ ನೀಡಲಾಗಿದೆ. ಒಳಹರಿವು ಹೆಚ್ಚಾದಂತೆ ನೀರು ಬಿಡುಗಡೆ ಪ್ರಮಾಣ ಇನ್ನಷ್ಟು ಹೆಚ್ಚಿಸುವ ಸಿದ್ಧತೆ ನಡೆದಿದ್ದು, ಆಸ್ತಿ-ಪಾಸ್ತಿ ಹಾಗೂ ಜಾನುವಾರು ರಕ್ಷಣೆಗೆ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಮನವಿ ಮಾಡಲಾಗಿದೆ.

ಮೈಸೂರು, ಆ.1: ನೆರೆ ರಾಜ್ಯ ಕೇರಳದ ವಯನಾಡು ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನ ಬೀಚನಹಳ್ಳಿ ಬಳಿ ಇರುವ ಕಬಿನಿ ಜಲಾಶಯವು (Kabini Reservoir) ಭರ್ತಿಯಾಗುವ ಹಂತ ತಲುಪಿದೆ. ಜಲಾಶಯದ ಭದ್ರತೆ ಹಾಗೂ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಕಬಿನಿ ಡ್ಯಾಂನಿಂದ ನದಿಗೆ 10,000 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ. ನದಿಗೆ ಹರಿಸಲಾದ ಈ ನೀರು ಕಪಿಲಾ (ಕಬಿನಿ) ನದಿಯ ಮೂಲಕ ತಮಿಳುನಾಡಿಗೆ ಹರಿದು ಹೋಗಲಿದೆ. ವಯನಾಡು ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರಿದಿರುವುದರಿಂದ ಕಬಿನಿ ಜಲಾಶಯಕ್ಕೆ ಒಳಹರಿವು ಭಾರಿ ಪ್ರಮಾಣದಲ್ಲಿ ಹೆಚ್ಚಾಗಿದೆ. ಪರಿಣಾಮವಾಗಿ ಹಂತ ಹಂತವಾಗಿ ಕಬಿನಿ ಡ್ಯಾಂನಿಂದ ನೀರು ಬಿಡುಗಡೆಯ ಪ್ರಮಾಣವನ್ನು ಇನ್ನಷ್ಟು ಹೆಚ್ಚಿಸಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.

ಕಪಿಲಾ ನದಿಯ ಎರಡೂ ದಂಡೆಗಳ ಹಾಗೂ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ತಾಲೂಕು ಆಡಳಿತ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳು ಜಾಗೃತಿ ಮೂಡಿಸಿ ಮುನ್ನೆಚ್ಚರಿಕೆ ನೀಡಿದ್ದಾರೆ. ನದಿ ನೀರು ಯಾವುದೇ ಕ್ಷಣದಲ್ಲೂ ಉಕ್ಕಿ ಹರಿಯುವ ಸಾಧ್ಯತೆಯಿರುವುದರಿಂದ ನದಿ ಪಾತ್ರದ ನಿವಾಸಿಗಳು ತಮ್ಮ ಮನೆ ಆಸ್ತಿ-ಪಾಸ್ತಿ ಹಾಗೂ ಜಾನುವಾರುಗಳ ರಕ್ಷಣೆಗೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕಾಗಿ ಮನವಿ ಮಾಡಲಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Aug 01, 2026 04:03 PM
Loading...
Unable to load recommendations.
Follow Us
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More