ಕೋಲಾರ ಜಿಲ್ಲಾಸ್ಪತ್ರೆ ಅವ್ಯವಸ್ಥೆ ಕಂಡು ಸಿಡಿಮಿಡಿಗೊಂಡ ಶಾಸಕಿ ಪೂರ್ಣಿಮ ಶ್ರೀನಿವಾಸ ಅಧಿಕಾರಿಗಳ ಬೆವರಿಳಿಸಿದರು

| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Oct 13, 2022 | 3:23 PM

ಆಸ್ಪತ್ರೆಯಲ್ಲಿ ಕನಿಷ್ಟ ಮೂಲಭೂತ ಸೌಕರ್ಯಗಳು ಇಲ್ಲ ಮತ್ತು ಗರ್ಭಿಣಿ ಮತ್ತು ಬಾಣಂತಿಯರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ತಲುಪಿಸಲಾಗುತ್ತಿಲ್ಲ ಎಂಬ ಸಂಗತಿಯನ್ನು ಅವರ ಗಮನಕ್ಕೆ ತಂದಾಗ ಪೂರ್ಣಿಮ ಸಿಡಿಮಿಡಿಗೊಂಡರು.

ಕೋಲಾರ: ಶಾಸಕಿ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯ ಪೂರ್ಣಿಮ ಶ್ರೀನಿವಾಸ್ (Purnima Srinivas) ಅವರು ಗುರುವಾರದಂದು ಕೋಲಾರದ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ್ ದುರವಸ್ಥೆಯ ಬಗ್ಗೆ ಆಸ್ಪತ್ರೆಯ ಸಿಬ್ಬಂದಿ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ (Health and Family Welfare) ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಆಸ್ಪತ್ರೆಯಲ್ಲಿ ಕನಿಷ್ಟ ಮೂಲಭೂತ ಸೌಕರ್ಯಗಳು (basic amenities) ಇಲ್ಲ ಮತ್ತು ಗರ್ಭಿಣಿ ಮತ್ತು ಬಾಣಂತಿಯರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ತಲುಪಿಸಲಾಗುತ್ತಿಲ್ಲ ಎಂಬ ಸಂಗತಿಯನ್ನು ಅವರ ಗಮನಕ್ಕೆ ತಂದಾಗ ಪೂರ್ಣಿಮ ಸಿಡಿಮಿಡಿಗೊಂಡರು.