AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲೆಂಡ್ ವಿರುದ್ಧ ಕೂಡ ಸೋತ ಇಂಡಿಯಾ ಚಾಂಪಿಯನ್ಸ್

ಇಂಗ್ಲೆಂಡ್ ವಿರುದ್ಧ ಕೂಡ ಸೋತ ಇಂಡಿಯಾ ಚಾಂಪಿಯನ್ಸ್

ಝಾಹಿರ್ ಯೂಸುಫ್
|

Updated on: Jul 28, 2025 | 9:31 AM

Share

WCL 2025: ವರ್ಲ್ಡ್​ ಚಾಂಪಿಯನ್​​ಶಿಪ್ ಆಫ್ ಲೆಜೆಂಡ್ಸ್ ಟೂರ್ನಿಯಲ್ಲಿ ಇಂಡಿಯಾ ಚಾಂಪಿಯನ್ಸ್ ತಂಡವು ಇನ್ನೂ ಸಹ ಗೆಲುವಿನ ಖಾತೆ ತೆರೆದಿಲ್ಲ. ಪಾಕಿಸ್ತಾನ್ ಚಾಂಪಿಯನ್ಸ್ ವಿರುದ್ಧದ ಮೊದಲ ಪಂದ್ಯದಿಂದ ಹಿಂದೆ ಸರಿದಿದ್ದ ಇಂಡಿಯಾ ಚಾಂಪಿಯನ್ಸ್, ದ್ವಿತೀಯ ಪಂದ್ಯದಲ್ಲಿ ಸೌತ್ ಆಫ್ರಿಕಾ ಚಾಂಪಿಯನ್ಸ್ ವಿರುದ್ಧ ಸೋಲನುಭವಿಸಿದ್ದರು. ಆ ಬಳಿಕ ಆಸ್ಟ್ರೇಲಿಯಾ ಚಾಂಪಿಯನ್ಸ್ ವಿರುದ್ಧದ ಕೂಡ ಸೋತಿದ್ದರು. ಇದೀಗ ಇಂಗ್ಲೆಂಡ್ ಚಾಂಪಿಯನ್ಸ್ ವಿರುದ್ಧ ಕೂಡ ಪರಾಜಯಗೊಂಡಿದೆ.

ವರ್ಲ್ಡ್​ ಚಾಂಪಿಯನ್​​ಶಿಪ್ ಆಫ್ ಲೆಜೆಂಡ್ಸ್ ಟೂರ್ನಿಯ 13ನೇ ಪಂದ್ಯದಲ್ಲಿ ಇಂಡಿಯಾ ಚಾಂಪಿಯನ್ಸ್ ತಂಡ ಸೋಲನುಭವಿಸಿದೆ. ಲೀಡ್ಸ್​ನ ಹೆಡಿಂಗ್ಲೆ ಮೈದಾನದಲ್ಲಿ ನಡೆದ ಇಂಗ್ಲೆಂಡ್ ಚಾಂಪಿಯನ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಡಿಯಾ ಚಾಂಪಿಯನ್ಸ್ ತಂಡದ ನಾಯಕ ಯುವರಾಜ್ ಸಿಂಗ್ ಬೌಲಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ಚಾಂಪಿಯನ್ಸ್ ಪರ ರವಿ ಬೊಪಾರ 55 ಎಸೆತಗಳಲ್ಲಿ 8 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ ಅಜೇಯ 110 ರನ್ ಬಾರಿಸಿದ್ದರು. ಈ ಭರ್ಜರಿ ಶತಕದ ನೆರವಿನೊಂದಿಗೆ ಇಂಗ್ಲೆಂಡ್ ಚಾಂಪಿಯನ್ಸ್ 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 223 ರನ್ ಕಲೆಹಾಕಿತು.

224 ರನ್​ಗಳ ಕಠಿಣ ಗುರಿ ಪಡೆದ ಇಂಡಿಯಾ ಚಾಂಪಿಯನ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ದಾಂಡಿಗ ರಾಬಿನ್ ಉತ್ತಪ್ಪ (0) ಶೂನ್ಯಕ್ಕೆ ಔಟಾದರೆ, ಶಿಖರ್ ಧವನ್ 17 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನು ಅಂಬಾಟಿ ರಾಯುಡು ಕಲೆಹಾಕಿದ್ದು ಕೇವಲ 28 ರನ್​ಗಳು ಮಾತ್ರ.

ಆ ಬಳಿಕ ಬಂದ ಯುವರಾಜ್ ಸಿಂಗ್ 38 ರನ್ ಬಾರಿಸಿದರೆ, ಸ್ಟುವರ್ಟ್ ಬಿನ್ನಿ 35 ರನ್​ ಚಚ್ಚಿದರು. ಇನ್ನು ಯೂಸುಫ್ ಪಠಾಣ್ 29 ಎಸೆತಗಳಲ್ಲಿ 52 ರನ್ ಸಿಡಿಸಿದರು. ಇದಾಗ್ಯೂ 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು ಇಂಡಿಯಾ ಚಾಂಪಿಯನ್ಸ್ ತಂಡವು 200 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಇಂಗ್ಲೆಂಡ್ ಚಾಂಪಿಯನ್ಸ್ ತಂಡವು 23 ರನ್​ಗಳ ಜಯ ಸಾಧಿಸಿದೆ.

ಗೆಲುವಿನ ಖಾತೆ ತೆರೆಯದ ಇಂಡಿಯಾ ಚಾಂಪಿಯನ್ಸ್:

ವರ್ಲ್ಡ್​ ಚಾಂಪಿಯನ್​​ಶಿಪ್ ಆಫ್ ಲೆಜೆಂಡ್ಸ್ ಟೂರ್ನಿಯಲ್ಲಿ ಇಂಡಿಯಾ ಚಾಂಪಿಯನ್ಸ್ ತಂಡವು ಇನ್ನೂ ಸಹ ಗೆಲುವಿನ ಖಾತೆ ತೆರೆದಿಲ್ಲ. ಪಾಕಿಸ್ತಾನ್ ಚಾಂಪಿಯನ್ಸ್ ವಿರುದ್ಧದ ಮೊದಲ ಪಂದ್ಯದಿಂದ ಹಿಂದೆ ಸರಿದಿದ್ದ ಇಂಡಿಯಾ ಚಾಂಪಿಯನ್ಸ್, ದ್ವಿತೀಯ ಪಂದ್ಯದಲ್ಲಿ ಸೌತ್ ಆಫ್ರಿಕಾ ಚಾಂಪಿಯನ್ಸ್ ವಿರುದ್ಧ ಸೋಲನುಭವಿಸಿದ್ದರು. ಆ ಬಳಿಕ ಆಸ್ಟ್ರೇಲಿಯಾ ಚಾಂಪಿಯನ್ಸ್ ವಿರುದ್ಧದ ಕೂಡ ಸೋತಿದ್ದರು. ಇದೀಗ ಇಂಗ್ಲೆಂಡ್ ಚಾಂಪಿಯನ್ಸ್ ವಿರುದ್ಧ ಕೂಡ ಪರಾಜಯಗೊಂಡಿದೆ.