DK Shivakumar; ಜನರಿಗೆ ನೀಡಿದ ಆಶ್ವಾಸನೆಗಳನ್ನು ಈಡೇರಿಸುವುದು ನಮ್ಮ ಬದ್ಧತೆ ಮತ್ತು ಆದ್ಯತೆಯಾಗಿದೆ: ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ

Updated on: May 18, 2023 | 2:12 PM

ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಸಲು ಅವಕಾಶ ಮಾಡಿಕೊಡಬೇಕಾಗಿ ರಾಜ್ಯಪಾಲರಿಗೆ ಕಳೆದ ರಾತ್ರಿ ತಾವೇ ಖುದ್ದಾಗಿ ಪತ್ರ ಬರೆದಿರುವುದಾಗಿ ಶಿವಕುಮಾರ್ ಹೇಳಿದರು.

ದೆಹಲಿ: ರಾಜ್ಯದ ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಡಿಕೆ ಶಿವಕುಮಾರ್ (DK Shivakumar) ಅವರು ಕೊನೆಗೂ ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭ (swearing-in ceremony) ನಡೆಸಲು ಅವಕಾಶ ಮಾಡಿಕೊಡಬೇಕಾಗಿ ಕರ್ನಾಟಕದ ರಾಜ್ಯಪಾಲರಿಗೆ (governor) ಕಳೆದ ರಾತ್ರಿ ತಾವೇ ಖುದ್ದಾಗಿ ಪತ್ರ ಬರೆದಿರುವುದಾಗಿ ಶಿವಕುಮಾರ್ ಹೇಳಿದರು. ಉಪಮುಖ್ಯಮಂತ್ರಿ ಸ್ಥಾನ ನೀಡಿರುವ ಬಗ್ಗೆ ತೃಪ್ತಿ ಇದೆಯಾ ಎಂದು ಕೇಳಿದ ಪ್ರಶ್ನೆಗೆ ಅವರು ಆ ಪ್ರಶ್ನೆಗೆ ಉತ್ತರಿಸುವ ಬದಲು, ಜನರು ನಮಗೆ ದೊಡ್ಡ ಮ್ಯಾಂಡೇಟ್ ನೀಡಿದ್ದಾರೆ, ಅವರ ಆಸೆ ಆಶೋತ್ತರಗಳಿಗೆ ಬದ್ಧರಾಗಿ ಕಾರ್ಯ ನಿರ್ವಹಿಸುವುದು ನಮ್ಮ ಕರ್ತವ್ಯವಾಗಿದೆ, ಕಾಂಗ್ರೆಸ್ ಪಕ್ಷ ನೀಡಿದ ಭರವಸೆಗಳನ್ನು ಈಡೇರಿಸುವುದು ನಮ್ಮ ಆದ್ಯತೆಯಾಗಿದೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.