ಬಿಜೆಪಿ ಸರ್ಕಾರದಂತೆ ನಮ್ಮ ಸರ್ಕಾರ ಅಧಿಕಾರ ದುರ್ಬಳಕೆ ಮಾಡುತ್ತಿಲ್ಲ: ಡಿಕೆ ಶಿವಕುಮಾರ್, ಡಿಸಿಎಂ

ಬಿಜೆಪಿ ಸರ್ಕಾರದಂತೆ ನಮ್ಮ ಸರ್ಕಾರ ಅಧಿಕಾರ ದುರ್ಬಳಕೆ ಮಾಡುತ್ತಿಲ್ಲ: ಡಿಕೆ ಶಿವಕುಮಾರ್, ಡಿಸಿಎಂ

ಅರುಣ್​ ಕುಮಾರ್​ ಬೆಳ್ಳಿ
|

Updated on: Jan 03, 2024 | 1:54 PM

ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ, ಹುಬ್ಬಳ್ಳಿ ಮತ್ತು ಬೆಂಗಳೂರು ನಗರಗಳಲ್ಲಿ ಸುಖಾಸುಮ್ಮನೆ ಅಮಾಯಕ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಕೇಸುಗಳನ್ನು ದಾಖಲಿಸಲಾಗಿತ್ತು. ಆಗ ಗೃಹ ಸಚಿವರಾಗಿದ್ದ ಆರ್ ಅಶೋಕ ಅವರಿಗೆ ಅದೆಲ್ಲ ಮರೆತು ಹೋದಂತಿದೆ, ಆದರೆ ತಾವು ಯಾವುದನ್ನೂ ಮರೆತಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದರು.

ಬೆಂಗಳೂರು: ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ನಾಯಕರಿಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ತಿರುಗೇಟು ನೀಡಿದ್ದಾರೆ. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ವಿಷಯದ ಬಗ್ಗೆ ಗೃಹ ಸಚಿವರು (Home Minister) ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ, ತಮ್ಮ ಸರ್ಕಾರ (Congress government) ಯಾರಿಗೂ ತೊಂದರೆ ನೀಡುತ್ತಿಲ್ಲ, ದೇಶಕ್ಕೆ ಮತ್ತು ರಾಜ್ಯಕ್ಕೆ ಅಗೌರವ ತೋರುವವರನ್ನು ಕಾನೂನಿನಡಿ ಪ್ರಶ್ನಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಶಿವಕುಮಾರ್ ಹೇಳಿದರು. ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದರೆ ಸರ್ಕಾರಕ್ಕೇನೂ ಅಭ್ಯಂತರವಿಲ್ಲ, ಸರ್ಕಾರ ರಚನೆಯಾಗಿ 7 ತಿಂಗಳವರೆಗೆ ಒಬ್ಬ ವಿರೋಧ ಪಕ್ಷದ ನಾಯಕನನ್ನು ಆರಿಸಿಕೊಳ್ಳಲಾಗದವರು ಇವತ್ತು ಪ್ರತಿಭಟನೆ ಮಾಡುತ್ತಿದ್ದಾರೆ. ನಾವು ರಾಜ್ಯದಲ್ಲಿ ಇನ್ನೂ ಬದುಕಿದ್ದೀವಿ ಅಂತ ಜನರಿಗೆ ತೋರಿಸುವ ಪ್ರಯತ್ನ ಅವರು ಮಾಡುತ್ತಿದ್ದಾರೆ, ಅಷ್ಟೇ ಎಂದು ಶಿವಕುಮಾರ್ ಹೇಳಿದರು. ಅವರ ಸರ್ಕಾರ ಅಧಿಕಾರದಲ್ಲಿದ್ದಾಗ ಏನೆಲ್ಲ ಮಾಡಿದ್ದರು ಅಂತ ಜ್ಞಾಪಕ ಮಾಡಿಕೊಳ್ಳಲಿ, ಕೇಸರಿ ಬಟ್ಟೆ ತೊಟ್ಟು ಠಾಣೆಗಳಿಗೆ ಹೋಗಿ ಪೊಲೀಸ್ ತೊಂದರೆ ಕೊಟ್ಟಿದ್ದರು. ಅವರ ಹಾಗೆ ಆಧಿಕಾರ ದುರುಪಯೋಗ ಮಾಡಿಕೊಳ್ಳುವ ಕೆಲಸಕ್ಕೆ ನಾವು ಇಳಿದಿಲ್ಲ ಎಂದು ಶಿವಕುಮಾರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ