ಏಕಕಾಲಕ್ಕೆ ಎಲ್ಲಾ ಭಾಷೆಗಳಲ್ಲಿ ‘ಜೇಮ್ಸ್’ ರಿಲೀಸ್?; ಚೇತನ್ ಕುಮಾರ್ ನೀಡಿದ್ರು ಉತ್ತರ
ಈ ಸಿನಿಮಾ ಕನ್ನಡ ಮಾತ್ರವಲ್ಲದೆ, ಹಿಂದಿ ಹಾಗೂ ಇತರ ಭಾಷೆಗಳಲ್ಲೂ ತೆರೆಗೆ ಬರುತ್ತಿದೆ. ಹಾಗಾದರೆ ಏಕಕಾಲಕ್ಕೆ ಎಲ್ಲ ಭಾಷೆಗಳಲ್ಲೂ ಈ ಸಿನಿಮಾ ರಿಲೀಸ್ ಆಗಲಿದೆಯೇ? ಈ ಪ್ರಶ್ನೆಗೆ ಚಿತ್ರದ ನಿರ್ದೇಶಕ ಚೇತನ್ ಕುಮಾರ್ ಉತ್ತರ ನೀಡಿದ್ದಾರೆ.
ಪುನೀತ್ ರಾಜ್ಕುಮಾರ್ (Puneeth Rajkumar) ನಟನೆಯ ‘ಜೇಮ್ಸ್’ ಚಿತ್ರ (James Movies) ತೆರೆಗೆ ಬರೋಕೆ ಇನ್ನು ಕೆಲವೇ ವಾರಗಳು ಬಾಕಿ ಇವೆ. ಈ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಚಿತ್ರತಂಡ ಬ್ಯುಸಿ ಆಗಿದೆ. ಫೆಬ್ರವರಿ 11ರಂದು ರಿಲೀಸ್ ಆದ ಟೀಸರ್ ಸಾಕಷ್ಟು ಸದ್ದು ಮಾಡುತ್ತಿದೆ. ಪರಭಾಷೆಯ ಸ್ಟಾರ್ಗಳು ಈ ಟೀಸರ್ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡುತ್ತಿದ್ದಾರೆ. ಈ ಸಿನಿಮಾ ಕನ್ನಡ ಮಾತ್ರವಲ್ಲದೆ, ಹಿಂದಿ ಹಾಗೂ ಇತರ ಭಾಷೆಗಳಲ್ಲೂ ತೆರೆಗೆ ಬರುತ್ತಿದೆ. ಹಾಗಾದರೆ ಏಕಕಾಲಕ್ಕೆ ಎಲ್ಲ ಭಾಷೆಗಳಲ್ಲೂ ಈ ಸಿನಿಮಾ ರಿಲೀಸ್ ಆಗಲಿದೆಯೇ? ಈ ಪ್ರಶ್ನೆಗೆ ಚಿತ್ರದ ನಿರ್ದೇಶಕ ಚೇತನ್ ಕುಮಾರ್ (Chetan Kumar) ಉತ್ತರ ನೀಡಿದ್ದಾರೆ. ‘ಎರಡು ಲಿರಿಕಲ್ ವಿಡಿಯೋ, ಒಂದು ಟ್ರೇಲರ್ ಬಿಡುಗಡೆ ಮಾಡುತ್ತೇವೆ. ಪ್ರೀ-ರಿಲೀಸ್ ಕಾರ್ಯಕ್ರಮ ಮಾಡುತ್ತೇವೆ. ಎಲ್ಲಾ ಭಾಷೆಗಳಲ್ಲೂ ಒಟ್ಟಿಗೆ ಸಿನಿಮಾ ರಿಲೀಸ್ ಮಾಡೋಕೆ ತಯಾರಿ ನಡೆಯುತ್ತಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಖಂಡಿತವಾಗಿಯೂ ಏಕಕಾಲಕ್ಕೆ ಎಲ್ಲಾ ಭಾಷೆಗಳಲ್ಲೂ ‘ಜೇಮ್ಸ್’ ರಿಲೀಸ್ ಆಗಲಿದೆ’ ಎಂದರು ಚೇತನ್ ಕುಮಾರ್.
ಇದನ್ನೂ ಓದಿ: ‘ಪುನೀತ್ ಸರ್ ಫೋಟೋ ಹಾಕಿಲ್ಲ, ತುಂಬ ಬೇಜಾರಾಯ್ತು’: ತಮ್ಮದೇ ಚಿತ್ರತಂಡದ ವಿರುದ್ಧ ವಿನೋದ್ ಪ್ರಭಾಕರ್ ಗರಂ
ಪುನೀತ್ ಅಭಿನಯದ ‘ಜೇಮ್ಸ್’ ಟೀಸರ್ ನೋಡಿ ವಿಶೇಷ ಸಾಲುಗಳನ್ನು ಬರೆದುಕೊಂಡ ನಟ ಪ್ರಭಾಸ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ

