Karnataka Assembly Polls; ಡಬಲ್ ಎಂಜಿನ್ ಸರ್ಕಾರ ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಮುಂದಿಟ್ಟುಕೊಂಡು ವೋಟು ಕೇಳುತ್ತೇವೆ: ತೇಜಸ್ವೀ ಸೂರ್ಯ, ಸಂಸದ

ಅರುಣ್​ ಕುಮಾರ್​ ಬೆಳ್ಳಿ

Updated on: Apr 08, 2023 | 6:35 PM

ಈ ಸರ್ಕಾರದಿಂದ ಕ್ಷಿಪ್ರ ಗತಿಯಲ್ಲಿ ಆಗುತ್ತಿರುವ ಕೆಲಸಗಳು, ಸರ್ಕಾರದ ಆಡಳಿತದಲ್ಲಿ ಬಡವರ, ಕೃಷಿಕರ ಕೂಲಿ ಕಾರ್ಮಿಕರ ಬದುಕು ಹಸನಾಗಿರುವುದು ಮೊದಲಾದ ವಿಚಾರಗಳನ್ನು ಮುಂದಿಟ್ಟುಕೊಂಡು ಜನರ ಮುಂದೆ ಹೋಗುವುದಾಗಿ ಸಂಸದ ಹೇಳಿದರು.

ಬೀದರ್: ಬಿಜೆಪಿ ಸಂಸದ ತೇಜಸ್ವೀ ಸೂರ್ಯ (Tejasvi Surya) ಇಂದು ಬೀದರ್ ನಲ್ಲಿ ವಿದ್ಯಾರ್ಥಿಗಳ ಜೊತೆ ಸಂವಾದ (interaction) ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದರು. ಯಾವ ವಿಚಾರಧಾರೆಗಳನ್ನು ಮುಂದಿಟ್ಟುಕೊಂಡು ಮತದಾರರ ಮುಂದೆ ಹೋಗ್ತೀರಿ ಅಂತ ಸುದ್ದಿಗಾರರು ಕೇಳಿದ್ದಕ್ಕೆ ಅವರು ಡಬಲ್ ಎಂಜಿನ್ (double engine government) ಸರ್ಕಾರ ಮಾಡಿರುವ ಅಭಿವೃದ್ಧಿ ಕೆಲಸಗಳು, ಈ ಸರ್ಕಾರದಿಂದ ಕ್ಷಿಪ್ರ ಗತಿಯಲ್ಲಿ ಆಗುತ್ತಿರುವ ಕೆಲಸಗಳು, ಸರ್ಕಾರದ ಆಡಳಿತದಲ್ಲಿ ಬಡವರ, ಕೃಷಿಕರ ಕೂಲಿ ಕಾರ್ಮಿಕರ ಬದುಕು ಹಸನಾಗಿರುವುದು ಮೊದಲಾದ ವಿಚಾರಗಳನ್ನು ಮುಂದಿಟ್ಟುಕೊಂಡು ಜನರ ಮುಂದೆ ಹೋಗುವುದಾಗಿ ಸಂಸದ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.