AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜ್ವಲ್ ಪ್ರಕರಣದಲ್ಲಿ ಮೇಲ್ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ, ಅಷ್ಟನ್ನು ಮಾತ್ರ ಹೇಳಬಲ್ಲೆ: ಸೂರಜ್ ರೇವಣ್ಣ

ಪ್ರಜ್ವಲ್ ಪ್ರಕರಣದಲ್ಲಿ ಮೇಲ್ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ, ಅಷ್ಟನ್ನು ಮಾತ್ರ ಹೇಳಬಲ್ಲೆ: ಸೂರಜ್ ರೇವಣ್ಣ

ಅರುಣ್​ ಕುಮಾರ್​ ಬೆಳ್ಳಿ
|

Updated on: Aug 08, 2025 | 4:38 PM

Share

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರೋಧ ಪಕ್ಷದ ಶಾಸಕರಿಗೆ ₹25 ಕೋಟಿ ಮತ್ತು ಆಡಳಿತ ಪಕ್ಷದ ಶಾಸಕರಿಗೆ ₹50 ಕೋಟಿ ಅನುದಾನ ನೀಡೋದಾಗಿ ಹೇಳಿದ್ದಾರೆ, ಇನ್ನೂ ಬಿಡುಗಡೆ ಮಾಡಿಲ್ಲ, ಸೋಮವಾರದಿಂದ ವಿಧಾನಸಭಾ ಅಧಿವೇಶನ ಶುರುವಾಗಲಿದೆ, ಅದಕ್ಕಿಂತ ಮೊದಲೇ ಮಾಡುತ್ತಾರೋ ಅಥವಾ ನಂತರ ಮಾಡುತ್ತಾರೋ ಗೊತ್ತಿಲ್ಲ, ಬಿಡುಗಡೆ ಮಾಡುವದನ್ನು ಅವರೇ ಹೇಳಿರುವುದರಿಂದ ಕಾಯಬೇಕು ಎಂದು ಸೂರಜ್ ರೇವಣ್ಣ ಹೇಳಿದರು.

ಹಾಸನ, ಆಗಸ್ಟ್ 8: ಬಹಳ ದಿನಗಳ ನಂತರ ಮಾಧ್ಯಮಗಳ ಮುಂದೆ ಹಾಜರಾದ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ (Suraj Revanna), ರಾಹುಲ್ ಗಾಂಧಿ ಮಾಡುತ್ತಿರುವ ಮತಗಳ್ಳತನದ ಆರೋಪಕ್ಕೆ ಪ್ರತಿಕ್ರಿಯಿಸಿ, ಈ ಪ್ರಶ್ನೆಗೆ ಚುನಾವಣಾ ಆಯೋಗ ಉತ್ತರಿಸಬೇಕು ಇಲ್ಲವೇ ಸಂಬಂಧಪಟ್ಟ ಅಧಿಕಾರಿಗಳು, ತಾನೇನು ಹೇಳಲಾದೀತು ಎಂದರು. ಅವರ ಸಹೋದರ ಪ್ರಜ್ವಲ್ ರೇವಣ್ಣಗೆ ಅತ್ಯಾಚಾರದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೊಳಪಡಿಸಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಅವರು ಮೇಲ್ಮನವಿ ಸಲ್ಲಿಸುವ ನಿರ್ಧಾರ ಮಾಡಿದ್ದೀವಿ, ಬೇರೆ ಏನು ಮಾಡಲಾದೀತು, ಪ್ರಕರಣ ನ್ಯಾಯಾಲಯದಲ್ಲಿರುವುದರಿಂದ ಅದರ ಬಗ್ಗೆ ಹೆಚ್ಚು ಮಾತಾಡುವುದು ಸೂಕ್ತ ಅಲ್ಲ ಎಂದು ಸೂರಜ್ ಹೇಳಿದರು.

ಇದನ್ನೂ ಓದಿ:  ಪ್ರಜ್ವಲ್ ರೇವಣ್ಣ ಕೇಸ್ ತನಿಖೆ ಮಾಡಿದ ಅಧಿಕಾರಿಗಳಿಗೆ ಬಂಪರ್ ಗಿಫ್ಟ್ ಘೋಷಿಸಿದ ಗೃಹ ಸಚಿವ

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ