ಬೇರೆ ಯಾವುದೇ ರಾಜ್ಯ ಜಾರಿ ಮಾಡದ ಗ್ಯಾರಂಟಿ ಯೋಜನೆಗಳನ್ನು ನಾವು ಮಾಡಿದ್ದೇವೆ: ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ

Updated on: Nov 07, 2024 | 5:58 PM

ಅನ್ನಪೂರ್ಣ ತುಕಾರಾಂ ಅವರ ತಂದೆ ತನ್ನ ಸ್ನೇಹಿತರಾಗಿದ್ದರು, ಆ ಅರ್ಥದಲ್ಲಿ ಅನ್ನಪೂರ್ಣ ತನಗೆ ಮಗಳಾಗಬೇಕು, ಹಾಗಾಗಿ ತುಕಾರಾಂ ಯಾವಾಗಲೂ ನಿಮ್ಮ ಮಗಳು ನಿಮ್ಮ ಮಗಳು ಅಂತ ಹೇಳುತ್ತಿರುತ್ತಾನೆ ಎಂದು ಸಿದ್ದರಾಮಯ್ಯ ಹೇಳಿದಾಗ ಸಂಸದ ಎರಡೂ ಕೈಜೋಡಿಸಿ ಕೃತಾರ್ಥ ಮನೋಭಾವ ಪ್ರದರ್ಶಿಸಿದರು.

ಬಳ್ಳಾರಿ: ನಿನ್ನೆ ಚನ್ನಪಟ್ಟಣದಲ್ಲಿ ಪ್ರಚಾರ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಇವತ್ತು ಸಂಡೂರಲ್ಲಿ ಅನ್ನಪೂರ್ಣ ತುಕಾರಾಂ ಪರ ಮತ ಕೇಳಿದರು. ಪ್ರಚಾರ ಸಭೆಯೊಂದನ್ನು ಉದ್ದೇಶಿಸಿ ಮಾತಾಡಿದ ಅವರು ತಮ್ಮ ಸರ್ಕಾರ ಅಧಿಕಾರವಹಿಸಿಕೊಂಡ 6-7 ತಿಂಗಳ ಅವಧಿಯಲ್ಲೇ ಜನರಿಗೆ ಭರವಸೆ ನೀಡಿದ್ದ 5 ಗ್ಯಾರಂಟಿ ಯೋಜನೆಗ ನ್ನು ಜಾರಿಗೆ ತಂದಿದೆ, ಇಲ್ಲಿನ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಸಂಸದ ತುಕಾರಾಂ ಅವರ ಪತ್ನಿ , ಅನ್ನಪೂರ್ಣ ಗೆದ್ದರೆ ಮಾತ್ರ ಸಂಡೂರು ಅಭಿವೃದ್ಧಿ ಹೊಂದುವುದು ಸಾಧ್ಯ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:    ಸಿದ್ದರಾಮಯ್ಯ ವಿಚಾರಣೆ ಬೆನ್ನಲ್ಲೇ ಲೋಕಾಯುಕ್ತ ಎಸ್ಪಿ ವಿರುದ್ಧ ಸ್ನೇಹಮಯಿ ಕೃಷ್ಣ ದೂರು

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.