Karnataka Assembly Polls; ನಮ್ಮಿಂದ ಸಾಧ್ಯವಾಗಬಹುದ ಕಾರ್ಯಕ್ರಮಗಳನ್ನಷ್ಟೇ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿದ್ದೇವೆ: ಸಿಎಂ ಇಬ್ರಾಹಿಂ, ಜೆಡಿಎಸ್ ರಾಜ್ಯಾಧ್ಯಕ್ಷ

ಅರುಣ್​ ಕುಮಾರ್​ ಬೆಳ್ಳಿ

Updated on: Apr 27, 2023 | 7:01 PM

ಪ್ರಣಾಳಿಕೆಯಲ್ಲಿ ಎಲ್ಲ ಆಯಾಮಗಳನ್ನು ಸೇರಿಸಲಾಗಿದೆ, ಯಾವುದನ್ನೂ ಕೈಬಿಟ್ಟಿಲ್ಲ, ಪಕ್ಷದ ಗೆಲುವಿಗೆ ಆಧಾರ ತಮ್ಮ ಪ್ರಣಾಳಿಕೆಯೇ ಎಂದು ಇಬ್ರಾಹಿಂ ಹೇಳಿದರು.

ಬೆಂಗಳೂರು: ಜೆಡಿಎಸ್ ಪಕ್ಷ ಇಂದು ತನ್ನ ಚುನಾವಣಾ ಪ್ರಣಾಳಿಕೆಯನ್ನು (manifesto) ಬಿಡುಗಡೆ ಮಾಡಿದೆ. ಪ್ರಣಾಳಿಕೆಯಲ್ಲಿ ನೀಡಿರುವ ಆಶ್ವಾಸನೆ ಮತ್ತು ಕಾರ್ಯಕ್ರಮಗಳ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾತಾಡಿದ ಪಕ್ಷದ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ (CM Ibrahim), ನಾವು ಯಾರನ್ನೂ ಟೀಕಿಸುವ ಗೋಜಿಗೆ ಹೋಗಿಲ್ಲ ಮತ್ತು ಯಾರ ಬಗ್ಗೆಯೂ ಟಿಪ್ಪಣಿ ಮಾಡಿಲ್ಲ, ನಮ್ಮಿಂದ ಸಾಧ್ಯವಾಗಬಹುದಾದ ಕಾರ್ಯಕ್ರಮಗಳನ್ನಷ್ಟೇ ಉಲ್ಲೇಖಿಸಿದ್ದೇವೆ ಎಂದು ಹೇಳಿದರು. ಪ್ರಣಾಳಿಕೆಯಲ್ಲಿ ಎಲ್ಲ ಆಯಾಮಗಳನ್ನು (aspects) ಸೇರಿಸಲಾಗಿದೆ, ಯಾವುದನ್ನೂ ಕೈಬಿಟ್ಟಿಲ್ಲ, ಪಕ್ಷದ ಗೆಲುವಿಗೆ ಆಧಾರ ತಮ್ಮ ಪ್ರಣಾಳಿಕೆಯೇ ಎಂದು ಇಬ್ರಾಹಿಂ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾಅ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Apr 27, 2023 07:01 PM
Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.