Assembly Polls; ರಾಮನಗರದಿಂದ ಡಿಕೆ ಸುರೇಶ್ ರನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿಸಲು ಪ್ರಸ್ತಾಪಗಳು ಬಂದಿವೆ: ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ

Updated on: Mar 14, 2023 | 2:04 PM

ಪಕ್ಷದ ಹೈಕಮಾಂಡ್ ಮತ್ತು ರಾಜ್ಯದ ನಾಯಕರ ಜೊತೆ ಚರ್ಚಿಸಿ ಸುರೇಶ್ ಕ್ಯಾಂಡಿಡೇಚರ್ ಬಗ್ಗೆ ಒಂದು ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಶಿವಕುಮಾರ್ ಹೇಳಿದರು

ಬೆಂಗಳೂರು: ರಾಮನಗರ ವಿಧಾನಸಭಾ ಕ್ಷೇತ್ರದಿಂದ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಂಸದ ಡಿಕೆ ಸುರೇಶ್ (DK Suresh) ಸ್ಪರ್ಧಿಸಲಿದ್ದಾರೆಯೇ? ಅಂಥದ್ದೊಂದು ಪ್ರಸ್ತಾಪವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಹೇಳುತ್ತಾರೆ. ಕ್ಷೇತ್ರದಿಂದ ಜನರಿಂದ ಪ್ರಸ್ತಾಪಗಳು ಬಂದಿವೆ ಆದರೆ ಇದುವರೆಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ, ಪಕ್ಷದ ಹೈಕಮಾಂಡ್ (high command) ಮತ್ತು ರಾಜ್ಯದ ನಾಯಕರ ಜೊತೆ ಚರ್ಚಿಸಿ ಸುರೇಶ್ ಕ್ಯಾಂಡಿಡೇಚರ್ ಬಗ್ಗೆ ಒಂದು ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಶಿವಕುಮಾರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Published on: Mar 14, 2023 02:03 PM
Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.