ಅಕ್ಕಿಗೆ ಸಂಬಂಧಿಸಿದಂತೆ ತೆಲಂಗಾಣ ಮತ್ತು ಛತ್ತೀಸ್ಗಡ್ ಸರ್ಕಾರಗಳಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಂದಿದೆ: ಕೆ ಹೆಚ್ ಮುನಿಯಪ್ಪ
ಬಡವರಿಗೆ ಅಕ್ಕಿ ನೀಡುವ ವಿಷಯದಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಪ್ರದರ್ಶಿಸಿದೆ, ದುಡ್ಡು ಸಂದಾಯ ಮಾಡುವುದಾಗಿ ಹೇಳಿದರೂ ಅಕ್ಕಿ ಕೊಡಲು ತಯಾರಿಲ್ಲ ಎಂದು ಸಚಿವರು ಹೇಳಿದರು.
ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ (Anna Bhagya scheme) ಬಿಪಿಎಲ್ ಕಾರ್ಡು ಹೊಂದಿರುವ ಕುಟುಂಗಳಿಗೆ ಹತ್ತತ್ತು ಕೆಜಿ ಅಕ್ಕಿ ಒದಗಿಸುವ ವ್ಯವಸ್ಥೆ ಮಾಡಲು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕಸರತ್ತ್ತು ಮುಂದುವರಿಸಿದೆ. ವಿಷಯಕ್ಕೆ ಸಂಬಂಧಿಸಿದಂತೆ, ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತಾಡಿದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆಹೆಚ್ ಮುನಿಯಪ್ಪ (KH Muniyappa) ಬಡವರಿಗೆ ಅಕ್ಕಿ ನೀಡುವ ವಿಷಯದಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಪ್ರದರ್ಶಿಸಿದೆ, ನಮ್ಮ ಸರ್ಕಾರ ದುಡ್ಡು ಸಂದಾಯ ಮಾಡುವುದಾಗಿ ಹೇಳಿದರೂ ಅಕ್ಕಿ ಕೊಡಲು ತಯಾರಿಲ್ಲ ಎಂದು ಹೇಳಿದರು. ಛತ್ತೀಸ್ ಗಡ್, ತೆಲಂಗಾಣ (Telangana) ಮತ್ತು ಪಂಜಾಬ್ ರಾಜ್ಯ ಸರ್ಕಾರಗಳೊಂದಿಗೆ ಮಾತುಕತೆ ನಡೆಯುತ್ತಿದೆ ಮತ್ತು ಅವರಿಂದ ಪಾಸಿಟಿವ್ ಪ್ರತಿಕ್ರಿಯೆ ಬಂದಿದೆ ಎಂದು ಸಚಿವರು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ