ಶಾಸಕರ ಅಮಾನತು ವಾಪಸ್ಸು ಪಡೆಯುವಂತೆ ಸ್ಪೀಕರ್ ಹಾಗೂ ಕಾನೂನು ಸಚಿವರಿಗೆ ಮನವಿ ಮಾಡಿದ್ದೇವೆ: ಅಶೋಕ

ಅರುಣ್​ ಕುಮಾರ್​ ಬೆಳ್ಳಿ

Updated on: Apr 25, 2025 | 3:41 PM

ಅಧಿವೇಶನದಲ್ಲಿ ಬಿಜೆಪಿ ಶಾಸಕರಿಂದ ಏನಾದರೂ ಲೋಪ ಆಗಿದ್ದರೆ ಅದನ್ನು ಒಪ್ಪಿಕೊಳ್ಳಲು ತಾವು ಸಿದ್ಧರಿರೋದಾಗಿ ಹೇಳಿದ ಅಶೋಕ ಸದನದೊಳಗೆ ಇದಕ್ಕೆ ಮೊದಲು ಸಹ ಅನೇಕ ಸಲ ಧರಣಿ ಮಾಡಿದ್ದೇವೆ, ಕಾಂಗ್ರೆಸ್ ಶಾಸಕರು ಮೈಕ್ ಕಿತ್ತಾಡಿ ಸ್ಪೀಕರ್ ಅವರನ್ನು ಎಳೆದಾಡಿದ ನಿದರ್ಶನಗಳೂ ಇವೆ, ಅವರಿಗೆ ಆಗ ಅನ್ವಯಿಸದ ಕಾನೂನು ಈಗ ನಮಗ್ಯಾಕೆ ಎಂದು ಅಶೋಕ ಪ್ರಶ್ನಿಸಿದರು.

ಬೆಂಗಳೂರು, ಏಪ್ರಿಲ್ 25: ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯೊಂದನ್ನು ನಡೆಸಿ ಮಾತಾಡಿದ ವಿರೋಧ ಪಕ್ಷದ ನಾಯಕ ಅರ್ ಅಶೋಕ, ಬಿಜೆಪಿಯ 18 ಶಾಸಕರನ್ನು ಸ್ಪೀಕರ್ ಯುಟಿ ಖಾದರ್ ಅಮಾನತು ಮಾಡಿರೋದು ಅಸಂವಿಧಾನಿಕ, ಅದೇಶವನ್ನು ವಾಪಸ್ಸು ಪಡೆಯುವಂತೆ ಸ್ಪೀಕರ್ ಮತ್ತು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಹೆಚ್ ಕೆ ಪಾಟೀಲ್ (HK Patil ) ಅವರೊಂದಿಗೆ ಮಾತಾಡಿದ್ದೇನೆ ಎಂದು ಹೇಳಿದರು. ಗಲಾಟೆ ಅಧಿವೇಶನದಲ್ಲಿ ನಡೆದಿರೋದು ಮತ್ತು ಸ್ಪೀಕರ್ ಅವರ ಶಿಕ್ಷೆ ಅಧಿವೇಶನದೊಳಗಿನ ಚಟುವಟಿಕೆಗಳಿಗೆ ಮಾತ್ರ ಸೀಮಿತವಾಗಿರಬೇಕು, ಆದರೆ ಅವರು, ಕಮಿಟಿ ಮೀಟಿಂಗ್ ಗಳಲ್ಲಿ ಶಾಸಕರು ಭಾಗವಹಿಸದಂತೆ ನಿರ್ಬಂಧ ಹೇರಿದ್ದಾರೆ ಮತ್ತು ಟಿಎ ಮತ್ತು ಡಿಎಯನ್ನೂ ನಿಲ್ಲಿಸಿದ್ದಾರೆ ಎಂದು ಅಶೋಕ ಹೇಳಿದರು.

ಇದನ್ನೂ ಓದಿ:  ಜಾತಿ ಗಣತಿ ವರದಿ ಹಿಂಪಡೆದು, ಪ್ರತಿ ಮನೆಗೆ ಹೋಗಿ ಸಮೀಕ್ಷೆ ಮಾಡಿ ವೈಜ್ಞಾನಿಕ ವರದಿ ರೂಪಿಸಿ: ಅಶೋಕ್ ಆಗ್ರಹ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.