ಪ್ರವೀಣ್ ಹತ್ಯೆ ನಡೆದ ಸ್ಥಳ ಕೇರಳ ಗಡಿಭಾಗಕ್ಕೆ ಹತ್ತಿರವಾಗಿರುವುದರಿಂದ ಆ ರಾಜ್ಯದ ಪೊಲೀಸ ನೆರವು ಕೋರಲಾಗಿದೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಪ್ರವೀಣ್ ಹತ್ಯೆ ನಡೆದ ಸ್ಥಳ ಕೇರಳ ಗಡಿಭಾಗಕ್ಕೆ ಹತ್ತಿರವಾಗಿರುವುದರಿಂದ ಆ ರಾಜ್ಯದ ಪೊಲೀಸ ನೆರವು ಕೋರಲಾಗಿದೆ: ಗೃಹ ಸಚಿವ ಆರಗ ಜ್ಞಾನೇಂದ್ರ

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Jul 27, 2022 | 12:34 PM

ಕರಾವಳಿ ಭಾಗದಲ್ಲಿ ಈ ರೀತಿಯ ಕೊಲೆಗಳು ನಡೆಯುತ್ತಲೇ ಇರುವುದು ಕಳವಳಕಾರಿ ಅಂಶವಾಗಿದೆ, ಕಳೆದ ರಾತ್ರಿ ತಾವು ಆ ಭಾಗದ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು ಆದಷ್ಟು ಬೇಗ ಹಂತಕರನ್ನು ಪತ್ತೆ ಹಚ್ಚಲಾಗುವುದು ಎಂದು ಸಚಿವರು ಹೇಳಿದರು.

ಬೆಂಗಳೂರು: ಯುವ ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು (Praveen Nettaru) ಕೊಲೆಯನ್ನು ದುರದೃಷ್ಟಕರ ಎಂದು ಹೇಳಿರುವ ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಅವರು ಹತ್ಯೆ ನಡೆದ ಸ್ಥಳ ಕೇರಳ (Kerala) ಗಡಿಭಾಗಕ್ಕೆ ಸಮೀಪ ಇರುವುದರಿಂದ ಆ ರಾಜ್ಯದ ಪೊಲೀಸರ ನೆರವನ್ನು ಸಹ ಕೇಳಲಾಗಿದೆ ಎಂದರು. ಕರಾವಳಿ ಭಾಗದಲ್ಲಿ ಈ ರೀತಿಯ ಕೊಲೆಗಳು ನಡೆಯುತ್ತಲೇ ಇರುವುದು ಕಳವಳಕಾರಿ ಅಂಶವಾಗಿದೆ, ಕಳೆದ ರಾತ್ರಿ ತಾವು ಆ ಭಾಗದ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು ಆದಷ್ಟು ಬೇಗ ಹಂತಕರನ್ನು ಪತ್ತೆ ಹಚ್ಚಲಾಗುವುದು ಎಂದು ಸಚಿವರು ಹೇಳಿದರು.