ನಾವು ಭಯೋತ್ಪಾದನೆಗೆ ಹೆದರುವುದಿಲ್ಲ, ಬಗ್ಗುವುದೂ ಇಲ್ಲ; ಕುರುಕ್ಷೇತ್ರದಲ್ಲಿ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಇಂದು (ನವೆಂಬರ್ 25) ಹರಿಯಾಣದ ಕುರುಕ್ಷೇತ್ರಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅವರು ಜ್ಯೋತಿಸರ್ ಅನುಭವ ಕೇಂದ್ರ ಮತ್ತು ಪಾಂಚಜನ್ಯ ಶಂಖ ಸ್ಮಾರಕವನ್ನು ಉದ್ಘಾಟಿಸಿದರು. ನಂತರ, ಅವರು ಗುರು ತೇಜ್ ಬಹದ್ದೂರ್ ಅವರ 350ನೇ ಹುತಾತ್ಮ ವಾರ್ಷಿಕೋತ್ಸವದಲ್ಲಿ ಭಾಗವಹಿಸಿದರು. ಗುರು ತೇಜ್ ಬಹದ್ದೂರ್ ಅವರಿಗೆ ಸಮರ್ಪಿತವಾದ ಪುಸ್ತಕವನ್ನು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಅವರು ವಿಶೇಷ ನಾಣ್ಯವನ್ನು ಸಹ ಬಿಡುಗಡೆ ಮಾಡಿದರು.
ಕುರುಕ್ಷೇತ್ರ, ನವೆಂಬರ್ 25: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು (ನವೆಂಬರ್ 25) ಹರಿಯಾಣದ ಕುರುಕ್ಷೇತ್ರಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅವರು ಜ್ಯೋತಿಸರ್ ಅನುಭವ ಕೇಂದ್ರ ಮತ್ತು ಪಾಂಚಜನ್ಯ ಶಂಖ ಸ್ಮಾರಕವನ್ನು ಉದ್ಘಾಟಿಸಿದರು. ಅವರು ಗುರು ತೇಜ್ ಬಹದ್ದೂರ್ ಅವರಿಗೆ ಸಮರ್ಪಿತವಾದ ಪುಸ್ತಕವನ್ನು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಅವರು ವಿಶೇಷ ನಾಣ್ಯವನ್ನು ಸಹ ಬಿಡುಗಡೆ ಮಾಡಿದರು. ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, “ನಾವು ಯಾರಿಗೂ ಬೆದರಿಕೆ ಹಾಕುವುದಿಲ್ಲ. ನಾವು ಹೆದರುವುದಿಲ್ಲ. ಭಯೋತ್ಪಾದನೆಗೆ ನಾವೆಂದೂ ತಲೆಬಾಗುವುದಿಲ್ಲ. ಇದು ನಮ್ಮ ಗುರುಗಳು ನೀಡಿದ ಮಂತ್ರ. ನಾವು ಶಾಂತಿಯನ್ನು ಬಯಸುತ್ತೇವೆ, ಆದರೆ ನಮ್ಮ ಭದ್ರತೆಯ ವಿಷಯದಲ್ಲಿ ನಾವು ರಾಜಿ ಮಾಡಿಕೊಳ್ಳುವುದಿಲ್ಲ. ಆಪರೇಷನ್ ಸಿಂಧೂರ್ ಇದಕ್ಕೆ ಒಂದು ಉತ್ತಮ ಉದಾಹರಣೆಯಾಗಿದೆ. ಇಡೀ ಜಗತ್ತು ಇದನ್ನು ನೋಡಿದೆ. ನವ ಭಾರತ ಹೆದರುವುದಿಲ್ಲ” ಎಂದು ಹೇಳಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

