ಕೊಡಗು ಜಿಲ್ಲೆಯಲ್ಲಿ ನಿಷೇಧಾಜ್ಞೆ ಹೇರಿರುವುದಕ್ಕೆ ನಮ್ಮ ವಿರೋಧವಿದೆ: ಶಾಸಕ ಅಪ್ಪಚ್ಚು ರಂಜನ್
ನಿಷೇಧಾಜ್ಞೆಯನ್ನು ಹಿಂತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡುತ್ತೇವೆ, ಅವರು ಅದಕ್ಕೊಪ್ಪದಿದ್ದರೆ ಕಾರ್ಯಕರ್ತರ ಜೊತೆ ಚರ್ಚೆ ನಡೆಸಿ ಮುಂದಿನ ಕ್ರಮದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅವರು ರಂಜನ್ ಹೇಳಿದರು.
ಕೊಡಗು ಜಿಲ್ಲೆಯಲ್ಲಿ 4-ದಿನ ನಿಷೇಧಾಜ್ಞೆ (Prohibitory Orders) ವಿಧಿಸಿರುವುದನ್ನು ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ (Appachu Ranjan) ವಿರೋಧಿಸುತ್ತಿದ್ದಾರೆ. ಮಡಿಕೇರಿಯಲ್ಲಿ ಮಂಗಳವಾರ ಟಿವಿ9 ವರದಿಗಾರನೊಂದಿಗೆ ಮಾತಾಡಿದ ಶಾಸಕರು ಸರ್ಕಾರದ ನೀತಿ ನಮಗೆ ಅರ್ಥವಾಗುತ್ತಿಲ್ಲ, ಜಿಲ್ಲೆಯಲ್ಲಿ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸುವ ಅವಶ್ಯಕತೆಯೇ ಇರಲಿಲ್ಲ ಎಂದು ಹೇಳಿದರು. ನಿಷೇಧಾಜ್ಞೆಯನ್ನು ಹಿಂತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ (DC) ಮನವಿ ಮಾಡುತ್ತೇವೆ, ಅವರು ಅದಕ್ಕೊಪ್ಪದಿದ್ದರೆ ಕಾರ್ಯಕರ್ತರ ಜೊತೆ ಚರ್ಚೆ ನಡೆಸಿ ಮುಂದಿನ ಕ್ರಮದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅವರು ರಂಜನ್ ಹೇಳಿದರು.