ಮೇಕೆದಾಟು ಯೋಜನೆ ಬಗ್ಗೆ ಕೇಂದ್ರ ಸರ್ಕಾರ ಬೇಗ ನಿಲುವು ಪ್ರಕಟಿಸಲಿ ಅಂತ ಮನವಿ ಮಾಡಲಾಗಿದೆ: ಶಿವಕುಮಾರ್
ಕೃಷ್ಣಾ ನದಿ ನೀರು ಹಂಚಿಕೆ ಬಗ್ಗೆಯೂ ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸುವುದು ಬಾಕಿಯುಳಿದುಕೊಂಡಿದೆ, ಅಲಮಟ್ಟಿ ಜಲಾಶಯದ ಎತ್ತರವನ್ನು 526 ಅಡಿಗಳಿಗೆ ಹೆಚ್ಚಿಸಲು ಕರ್ನಾಟಕ ಅನುಮತಿ ಕೋರಿದೆ, ಅನುಮತಿ ಸಿಕ್ಕುತ್ತದೆ ಎಂಬ ಭರವಸೆಯೊಂದಿಗೆ ಕರ್ನಾಟಕ ಪೂರಕ ಕಾಮಗಾರಿಗಳನ್ನು ಕೈಗೆತ್ತಿಕೊಂಡಿರುವ ಕಾರಣ ಆದಷ್ಟು ಬೇಗ ಗೆಜೆಟ್ ನೋಟಿಫಿಕೇಶನ್ ಹೊರಡಿಸಬೇಕೆಂದು ಕೋರಲಾಗಿದೆ ಎಂದು ಶಿವಕುಮಾರ್ ಹೇಳಿದರು.
ಬೆಂಗಳೂರು, ಫೆ. 26: ನಿನ್ನೆ ಬೆಳ್ಳಂಬೆಳಿಗ್ಗೆಯೇ ದೆಹಲಿಗೆ ತೆರಳಿದ್ದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬೆಂಗಳೂರಿಗೆ ವಾಪಸ್ಸಾಗಿದ್ದು ಇಂದು ಸುದ್ದಿಗೋಷ್ಠಿಯಯೊಂದನ್ನು ನಡೆಸಿ ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಚರ್ಚೆ ಮಾಡಿದ ವಿಷಯಗಳ ಬಗ್ಗೆ ವಿವರಣೆ ನೀಡಿದರು. ಮೇಕೆದಾಟು ಯೋಜನೆಯ (Mekedatu Project) ಬಗ್ಗೆ ಕೇಂದ್ರ ಸರ್ಕಾರ ತನ್ನ ನಿಲುವನ್ನು ಬೇಗ ಪ್ರಕಟಿಸಲಿ, ಕೇಂದ್ರದಿಂದ ಕರ್ನಾಟಕ ಮತ್ತು ತಮಿಳುನಾಡು ಎರಡೂ ರಾಜ್ಯಗಳಿಗೆ ತೊಂದರೆಯಾಗುವುದು ಬೇಡವೆಂದು ತಾನು ಕೇಂದ್ರಕ್ಕೆ ತಿಳಿಸಿದ್ದಾಗಿ ಶಿವಕುಮಾರ್ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: Mekedatu Project: ಮೇಕೆದಾಟು ಯೋಜನೆ ಪರಿಶೀಲಿಸುವಂತೆ ಕೇಂದ್ರ ಪರಿಸರ ಸಚಿವಾಲಯಕ್ಕೆ ಮತ್ತೆ ಅರ್ಜಿ ಸಲ್ಲಿಸಿದ ಕರ್ನಾಟಕ