ಭಾರತ-ರಷ್ಯಾ ಬಾಂಧವ್ಯಕ್ಕೆ ನಮ್ಮ ತಕರಾರಿಲ್ಲ, ನಾವು ಕೂಡ ಫ್ರೆಂಡ್ಸ್ ಆಗಿರೋಣ; ಪುಟಿನ್ಗೆ ಪಾಕ್ ಪ್ರಧಾನಿ ಮನವಿ
ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಬೀಜಿಂಗ್‌ನಲ್ಲಿ ವ್ಲಾಡಿಮಿರ್ ಪುಟಿನ್ ಅವರಿಗೆ ಇಸ್ಲಾಮಾಬಾದ್ ಭಾರತದೊಂದಿಗಿನ ರಷ್ಯಾದ ಸಂಬಂಧಗಳನ್ನು ಗೌರವಿಸುತ್ತದೆ ಮತ್ತು ಮಾಸ್ಕೋದೊಂದಿಗೆ ಬಲವಾದ ಸಂಬಂಧವನ್ನು ಬಯಸುತ್ತದೆ ಎಂದು ಹೇಳಿದರು. "ಪಾಕಿಸ್ತಾನವನ್ನು ಬೆಂಬಲಿಸಿದ್ದಕ್ಕಾಗಿ ಮತ್ತು ಈ ಪ್ರದೇಶದಲ್ಲಿ ಸಮತೋಲನ ಕ್ರಿಯೆಯನ್ನು ಹೊಂದಲು ಪ್ರಯತ್ನಿಸಿದ್ದಕ್ಕಾಗಿ ನಾನು ನಿಮಗೆ ಧನ್ಯವಾದ ಹೇಳಲು ಬಯಸುತ್ತೇನೆ. ಭಾರತದೊಂದಿಗಿನ ನಿಮ್ಮ ಸಂಬಂಧವನ್ನು ನಾವು ಗೌರವಿಸುತ್ತೇವೆ ಎಂದು ಹೇಳಿದ್ದಾರೆ.
ಬೀಜಿಂಗ್, ಸೆಪ್ಟೆಂಬರ್ 2: ಚೀನಾದಲ್ಲಿ ನಡೆಯುತ್ತಿರುವ ಶೃಂಗಸಭೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಚೀನಾ ಅಧ್ಯಕ್ಷ ಹಾಗೂ ರಷ್ಯಾದ ಅಧ್ಯಕ್ಷರ ಜೊತೆ ಆಪ್ತವಾಗಿ ಕಾಣಿಸಿಕೊಂಡಿದ್ದು ಅಮೆರಿಕ ಅಧ್ಯಕ್ಷ ಟ್ರಂಪ್ (Donald Trump) ಮತ್ತು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರ ನಿದ್ರೆಗೆಡಿಸಿತ್ತು. ನಿನ್ನೆ ನಡೆದ ದ್ವಿಪಕ್ಷೀಯ ಮಾತುಕತೆಯಲ್ಲೂ ಭಾರತ ಮತ್ತು ರಷ್ಯಾ ತಮ್ಮ ಸಂಬಂಧವನ್ನು ಇನ್ನಷ್ಟು ಗಟ್ಟಿಗೊಳಿಸುವ ಮಾತುಗಳನ್ನಾಡಿದ್ದರು. ಅಲ್ಲದೆ, ಪುಟಿನ್ ಹಾಗೂ ಮೋದಿ ಒಂದೇ ಕಾರಿನಲ್ಲಿ ಪ್ರಯಾಣಿಸಿ, ಖಾಸಗಿಯಾಗಿ 45 ನಿಮಿಷಕ್ಕೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದರು. ಇದರ ಬೆನ್ನಲ್ಲೇ ಚೀನಾದಲ್ಲಿ ಇಂದು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಜೊತೆ ರಷ್ಯಾ ಅಧ್ಯಕ್ಷ ಪುಟಿನ್ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ಈ ವೇಳೆ ಶೆಹಬಾಜ್ ಷರೀಫ್ ಆಡಿರುವ ಮಾತುಗಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪುಟಿನ್ ಅವರೊಂದಿಗೆ ಮಾತನಾಡಿದ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಭಾರತ ಹಾಗೂ ರಷ್ಯಾದ ಸಂಬಂಧದ ಪ್ರಸ್ತಾಪ ಮಾಡಿದ್ದಾರೆ. “ಕಷ್ಟದ ಸಮಯದಲ್ಲಿ ಪಾಕಿಸ್ತಾನದ ಬೆಂಬಲಕ್ಕೆ ನಿಂತ ರಷ್ಯಾಗೆ ನಮ್ಮ ಧನ್ಯವಾದ. ನಾವು ರಷ್ಯಾ ಹಾಗೂ ಭಾರತದ ನಡುವಿನ ಸಂಬಂಧಗಳನ್ನು ಗೌರವಿಸುತ್ತೇವೆ. ಆ ಬಗ್ಗೆ ನಮ್ಮ ತಕರಾರು ಏನೂ ಇಲ್ಲ. ಅದು ಒಳ್ಳೆಯದೇ. ಆದರೆ, ನಾವು ಕೂಡ ರಷ್ಯಾದೊಂದಿಗೆ ಅದೇ ರೀತಿಯ ಉತ್ತಮ ಬಾಂಧವ್ಯ ಹೊಂದಲು, ಸಂಬಂಧವನ್ನು ಗಟ್ಟಿಗೊಳಿಸಿಕೊಳ್ಳಲು ಬಯಸುತ್ತೇವೆ” ಎಂದು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಚೀನಾದಲ್ಲಿ ಪುಟಿನ್ ಅವರಿಗೆ ತಿಳಿಸಿದ್ದಾರೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

