ಕೆಪಿಎಸ್ಸಿಯ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಸರ್ಕಾರವೂ ಶಾಮೀಲಾಗಿರುವ ಶಂಕೆ ಹುಟ್ಟಿದೆ: ನಾರಾಯಣಗೌಡ , ಕರವೇ
ಕನ್ನಡಿಗರಿಗೆ ಅನ್ಯಾಯವಾಗಿದೆ ಅಂತ ಹೈಕೋರ್ಟ್ ಹೇಳಿದಾಗ್ಯೂ ಸಿದ್ದರಾಮಯ್ಯ ಸರ್ಕಾರ ಕ್ರಮ ತೆಗೆದುಕೊಳ್ಳುತ್ತಿಲ್ಲ, ಕಳ್ಳರನ್ನು ಮತ್ತು ಭ್ರಷ್ಟರನ್ನು ರಕ್ಷಿಸುವುದೇ ತನ್ನ ಆದ್ಯತೆ ಎಂದು ಸರ್ಕಾರ ಭಾವಿಸಿದಂತಿದೆ, ರಕ್ತದಲ್ಲಿ ಬರೆದುಕೊಟ್ಟರೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮನಸ್ಸು ಕರಗುತ್ತಿಲ್ಲ, ಭ್ರಷ್ಟಾಚಾರದಲ್ಲಿ ಸರಕಾರವೂ ಶಾಮೀಲಾಗಿರುವ ಶಂಕೆ ನಮ್ಮನ್ನು ಕಾಡುತ್ತಿದೆ ಎಂದು ನಾರಾಯಣಗೌಡ ಹೇಳಿದರು.
ಬೆಂಗಳೂರು, ಮಾರ್ಚ್ 11: ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸುವ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದ ಸುಮಾರು 70 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ಅನ್ಯಾಯವಾಗಿರುವುದನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಒಂದು ತಿಂಗಳಿಗೂ ಹೆಚ್ಚು ಸಮಯದಿಂದ ಪ್ರತಿಭಟನೆ ಮಾಡುತ್ತಿದೆ. ನಗರದ ಫ್ರೀಡಂ ಪಾರ್ಕ್ನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿರುವ ವೇದಿಕೆಯ ಅಧ್ಯಕ್ಷ ಟಿಎ ನಾರಾಯಣಗೌಡ ಟಿವಿ9 ಪ್ರತಿನಿಧಿಯೊಂದಿಗೆ ಮಾತಾಡಿದ್ದು ವಿಷಯ ತಾರ್ಕಿಕ ಕಾಣುವವರಗೆ ಹೋರಾಟ ಮುಂದುವರಿಸುವುದಾಗಿ ಹೇಳಿದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಕಂಡಕ್ಟರ್ ವಿರುದ್ಧ ಪೋಕ್ಸೋ ಕೈಸ್ ದಾಖಲಿಸಿರುವ ಇನ್ಸ್ಪೆಕ್ಟರ್ ಕನ್ನಡದವನೋ ಮರಾಠಿಯೋ: ಟಿಎ ನಾರಾಯಣ ಗೌಡ, ಕರವೇ
Latest Videos

