ನಮಗೆ ಜಂಗಲ್ರಾಜ್ ಬೇಡ ಮಂಗಲ್ ರಾಜ್ ಬೇಕು; ಬಿಹಾರದ ಮತದಾರರು ಹೇಳೋದೇನು?
ಬಿಹಾರದಲ್ಲಿ ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನ್ ಮತ್ತು ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟದ ನಾಯಕರು ಬಿರುಸಿನಿಂದ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ. ನಿನ್ನೆ (ಬುಧವಾರ) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಬಿಜೆಪಿ ನಾಯಕ ಅಮಿತ್ ಶಾ ಬಿಹಾರದಲ್ಲಿ ಚುನಾವಣಾ ಪ್ರಚಾರ ನಡೆಸಿದ್ದರು. ಇಂದು ಪ್ರಧಾನಿ ನರೇಂದ್ರ ಮೋದಿ ಬಿಹಾರದಲ್ಲಿ ಚುನಾವಣಾ ಪ್ರಚಾರ ನಡೆಸಿದ್ದಾರೆ. ಈ ನಡುವೆ ಬಿಹಾರದ ಮತದಾರರೊಬ್ಬರು ಮಾತನಾಡಿರುವ ವಿಡಿಯೋ ಸದ್ದು ಮಾಡುತ್ತಿದೆ. ನಮಗೆ ಜಂಗಲ್ ರಾಜ್ ಬೇಡ, ನಮಗೆ ಮಂಗಲ್ರಾಜ್ ಬೇಕು. ಮಂಗಲ್ ರಾಜ್ ನೀಡಲು ಬಿಜೆಪಿ ಮತ್ತು ನಿತೀಶ್ ಕುಮಾರ್ ಅವರಿಂದ ಮಾತ್ರ ಸಾಧ್ಯ. ಆರ್ಜೆಡಿಯ ಜಂಗಲ್ರಾಜ್ನಿಂದ ನಾವು ಬೇಸತ್ತಿದ್ದೇವೆ. ಈ ಬಾರಿ ಯಾವ ಪಕ್ಷ ಅಧಿಕಾರಕ್ಕೆ ಬರಲಿದೆ ಎಂಬ ಬಗ್ಗೆ ಗೊಂದಲವೇ ಇಲ್ಲ. ಈ ಬಾರಿ ಮತ್ತೊಮ್ಮೆ ನಿತೀಶ್ ಕುಮಾರ್ ಸರ್ಕಾರ ರಚಿಸುವುದು ಖಚಿತ. ಅದರಲ್ಲಿ ನಮಗೆ ಯಾವುದೇ ಅನುಮಾನವಿಲ್ಲ ಎಂದು ಮತದಾರರೊಬ್ಬರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಪಾಟ್ನಾ, ಅಕ್ಟೋಬರ್ 30: ಬಿಹಾರದ ವಿಧಾನಸಭಾ ಚುನಾವಣೆಗೆ (Bihar Assembly Elections) ಕೆಲವೇ ದಿನಗಳು ಬಾಕಿ ಇವೆ. ಹೀಗಾಗಿ, ಬಿಹಾರದಲ್ಲಿ ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನ್ ಮತ್ತು ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟದ ನಾಯಕರು ಬಿರುಸಿನಿಂದ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ. ನಿನ್ನೆ (ಬುಧವಾರ) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಬಿಜೆಪಿ ನಾಯಕ ಅಮಿತ್ ಶಾ ಬಿಹಾರದಲ್ಲಿ ಚುನಾವಣಾ ಪ್ರಚಾರ ನಡೆಸಿದ್ದರು. ಇಂದು ಪ್ರಧಾನಿ ನರೇಂದ್ರ ಮೋದಿ ಬಿಹಾರದಲ್ಲಿ ಚುನಾವಣಾ ಪ್ರಚಾರ ನಡೆಸಿದ್ದಾರೆ. ಈ ನಡುವೆ ಬಿಹಾರದ ಮತದಾರರೊಬ್ಬರು ಮಾತನಾಡಿರುವ ವಿಡಿಯೋ ಸದ್ದು ಮಾಡುತ್ತಿದೆ.
‘ನಮಗೆ ಜಂಗಲ್ ರಾಜ್ ಬೇಡ, ನಮಗೆ ಮಂಗಲ್ರಾಜ್ ಬೇಕು. ಮಂಗಲ್ ರಾಜ್ ನೀಡಲು ಬಿಜೆಪಿ ಮತ್ತು ನಿತೀಶ್ ಕುಮಾರ್ ಅವರಿಂದ ಮಾತ್ರ ಸಾಧ್ಯ. ಆರ್ಜೆಡಿಯ ಜಂಗಲ್ರಾಜ್ನಿಂದ ನಾವು ಬೇಸತ್ತಿದ್ದೇವೆ. ಈ ಬಾರಿ ಯಾವ ಪಕ್ಷ ಅಧಿಕಾರಕ್ಕೆ ಬರಲಿದೆ ಎಂಬ ಬಗ್ಗೆ ಗೊಂದಲವೇ ಇಲ್ಲ. ಈ ಬಾರಿ ಮತ್ತೊಮ್ಮೆ ನಿತೀಶ್ ಕುಮಾರ್ ಸರ್ಕಾರ ರಚಿಸುವುದು ಖಚಿತ. ಅದರಲ್ಲಿ ನಮಗೆ ಯಾವುದೇ ಅನುಮಾನವಿಲ್ಲ’ ಎಂದು ಮತದಾರರೊಬ್ಬರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ