ಪ್ರಜ್ವಲ್ ರೇವಣ್ಣ ಯಾವ ದೇಶದಲ್ಲಿದ್ದರೂ ಅರೆಸ್ಟ್ ಮಾಡಿಕೊಂಡು ಬರುತ್ತೇವೆ: ಸಿದ್ದರಾಮಯ್ಯ, ಸಿಎಂ

Updated on: May 03, 2024 | 1:09 PM

ಇದೇ ಹಿನ್ನಲೆಯಲ್ಲಿ ತಾವು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರವೊಂದನ್ನು ಬರೆದು ಪ್ರಜ್ವಲ್ ರೇವಣ್ಣನ ಡಿಪ್ಲೋಮ್ಯಾಟಿಕ್ ಪಾಸ್ಪೋರ್ಟ್ ರದ್ದು ಮಾಡುವಂತೆ ಮನವಿ ಮಾಡಿದ್ದೇನೆ, ಅದು ರದ್ದಾದರೆ, ಪ್ರಜ್ವಲ್ ಯಾವ ದೇಶದಲ್ಲೂ ಇರಲಾಗಲ್ಲ, ಪ್ರಧಾನಿಯವರು ಅದನ್ನು ಮಾಡಲಿ ಎಂದರು.

ಬಾಗಲಕೋಟೆ: ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ್ ಪರ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah), ಡೆಪ್ಯುಟಿ ಸಿಎಂ ಡಿಕೆ ಶಿವಕುಮಾರ್ (DCM DK Shivakumar) ನಗರದಲ್ಲಿ ಪ್ರಚಾರ ಮಾಡಿದರು. ಏತನ್ಮಧ್ಯೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸಿದ್ದಾರಾಮಯ್ಯ, ಪ್ರಜ್ವಲ್ ರೇವಣ್ಣ (Prajwal Revanna) ಯಾವ ದೇಶದಲ್ಲಿದ್ದರೂ ತಮ್ಮ ಸರ್ಕಾರ ಎಳೆದುತರಲಿದೆ ಎಂದರು. ಇದೇ ಹಿನ್ನಲೆಯಲ್ಲಿ ತಾವು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರವೊಂದನ್ನು ಬರೆದು ಪ್ರಜ್ವಲ್ ರೇವಣ್ಣನ ಡಿಪ್ಲೋಮ್ಯಾಟಿಕ್ ಪಾಸ್ಪೋರ್ಟ್ ರದ್ದು ಮಾಡುವಂತೆ ಮನವಿ ಮಾಡಿದ್ದೇನೆ, ಅದು ರದ್ದಾದರೆ, ಪ್ರಜ್ವಲ್ ಯಾವ ದೇಶದಲ್ಲೂ ಇರಲಾಗಲ್ಲ, ಪ್ರಧಾನಿಯವರು ಅದನ್ನು ಮಾಡಲಿ ಎಂದರು. ಪ್ರಜ್ವಲ್ ಪ್ರಕರಣದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸರ್ಕಾರ ಮತ್ತು ಬಿಜೆಪಿ ನಿಲುವನ್ನು ಸ್ಪಷ್ಟಪಡಿಸಿದ್ದಾರೆ ಅಂತ ಹೇಳಿದಾಗ ಸಿದ್ದರಾಮಯ್ಯ ಅವರ ನಿಲುವು ಏನು? ಕೇಂದ್ರ ಸರ್ಕಾರ ಗಮನಕ್ಕೆ ಬಾರದೆ ಯಾರಾದರೂ ವಿದೇಶಕ್ಕೆ ಹೋಗುವುದು ಸಾಧ್ಯವೇ? ಕೇಂದ್ರ ಸರ್ಕಾರವೇ ಪ್ರಜ್ವಲ್ ರಕ್ಷಣೆ ನಿಂತಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇನ್ನಷ್ಟು ಓದಿ:  ವಿಧಾನಸಭೆ ಎಲೆಕ್ಷನ್​ನಲ್ಲಿ ಸಿದ್ದರಾಮಯ್ಯ ನನ್ನ ಜತೆ ಸಂಧಾನ ಮಾಡಿಕೊಂಡಿದ್ರು: ರೆಡ್ಡಿ ಬಾಂಬ್  

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More