ಕಾವೇರಿ ನೀರು ನಿಯಂತ್ರಣಾ ಸಮಿತಿ ಆದೇಶವನ್ನು ಸುಪ್ರೀಮ್ ಕೋರ್ಟ್ನಲ್ಲಿ ಪ್ರಶ್ನಿಸುತ್ತೇವೆ: ಸಿದ್ದರಾಮಯ್ಯ, ಸಿಎಂ
ನೀರಿಗಾಗಿ ಪ್ರತಿಭಟನೆಗಳು ಹೆಚ್ಚಾಗುತ್ತಿರುವ ಬಗ್ಗೆ ಪತ್ರಕರ್ತರು ಕೇಳದಾಗ, ನಿರ್ದಿಷ್ಟವಾಗಿ ಅದಕ್ಕೆ ಉತ್ತರ ನೀಡದ ಮುಖ್ಯಮಂತ್ರಿ ಪರಿಸ್ಥಿತಿಯ ಅರಿವು ನಮಗಿದೆ, ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶದ ವಿರುದ್ಧ ಸರ್ವೋಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸುತ್ತೇವೆ ಅಂತ ಇಂಗ್ಲಿಷ್ ಭಾಷೆಯಲ್ಲಿ ಹೇಳಿದರು.
ಚಾಮರಾಜನಗರ: ಕಾವೇರಿ ನೀರು ನಿಯಂತ್ರಣಾ ಸಮಿತಿ (CWRC) ತಮಿಳುನಾಡುಗೆ ಪುನಃ ಪ್ರತಿದಿನ 3,000 ಕ್ಯೂಸೆಕ್ಸ್ ನೀರು ಬಿಡುವಂತೆ ನೀಡಿರುವ ಆದೇಶವನ್ನು ಪ್ರಶ್ನಿಸಿ ಸುಪ್ರೀಮ್ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹೇಳಿದರು. ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ (Male Mahadeshwara Betta) ಪ್ರಾರ್ಥನೆ ಸಲ್ಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸಿದ್ದರಾಮಯ್ಯ, ರಾಜ್ಯದ ಜಲಾಶಯಗಳಲ್ಲಿ ನೀರಿಲ್ಲ ಅಂತ ಹೇಳಿ ತಾವು ವಕೀಲರೊಂದಿಗೆ ಮಾತಾಡಿದ್ದು ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶವನ್ನು ಸುಪ್ರೀಮ್ ಕೋರ್ಟ್ ನಲ್ಲಿ ಪ್ರಶ್ನಿಸಬಹುದು ಅಂತ ಹೇಳಿದ್ದಾರೆ ಎಂದರು. ನೀರಿಗಾಗಿ ಪ್ರತಿಭಟನೆಗಳು ಹೆಚ್ಚಾಗುತ್ತಿರುವ ಬಗ್ಗೆ ಪತ್ರಕರ್ತರು ಕೇಳದಾಗ, ನಿರ್ದಿಷ್ಟವಾಗಿ ಅದಕ್ಕೆ ಉತ್ತರ ನೀಡದ ಮುಖ್ಯಮಂತ್ರಿ ಪರಿಸ್ಥಿತಿಯ ಅರಿವು ನಮಗಿದೆ, ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶದ ವಿರುದ್ಧ ಸರ್ವೋಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸುತ್ತೇವೆ ಅಂತ ಇಂಗ್ಲಿಷ್ ಭಾಷೆಯಲ್ಲಿ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ