ವಿನಯ್ ಸೋಮಯ್ಯ ಸಾವಿಗೆ ನ್ಯಾಯ ಸಿಗೋವರೆಗೆ ಹೋರಾಟ, ಶಾಸಕರ ವಿರುದ್ಧ ಎಫ್​ಐಅರ್ ದಾಖಲಾಗಬೇಕು: ಅಶೋಕ

ಅರುಣ್​ ಕುಮಾರ್​ ಬೆಳ್ಳಿ

Updated on: Apr 04, 2025 | 6:27 PM

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯ ಪೊಲೀಸ್ ಠಾಣೆಗಳೆಲ್ಲ ಕಾಂಗ್ರೆಸ್ ಕಚೇರಿಗಳಾಗಿ ಮಾರ್ಪಟ್ಟಿವೆ, ಪೊಲೀಸರು ನಿರಂತರವಾಗಿ ಒತ್ತಡದಲ್ಲಿ ಕೆಲಸ ಮಾಡುವ ವಾತಾವರಣ ಸೃಷ್ಟಿಯಾಗಿದೆ, ಯಾದಗಿರಿಯ ಪರಶುರಾಮ್, ಕಲಬುರಗಿಯ ಸಚಿನ್, ಬೆಳಗಾವಿಯ ರುದ್ರಣ್ಣ, ವಾಲ್ಮೀಕಿ ನಿಗಮದ ಚಂದ್ರಶೇಖರ್ ಮೊದಲಾದವರ ಅತ್ಮಹತ್ಯೆ ಪ್ರಕರಣಗಳು ಕಣ್ಣ ಮುಂದಿವೆ ಎಂದು ಅಶೋಕ ಹೇಳಿದರು.

ಬೆಂಗಳೂರು, ಏಪ್ರಿಲ್ 4: ವಿನಯ್ ಸೋಮಯ್ಯ ಅತ್ಮಹತ್ಯೆ ಪ್ರಕರಣ ರಾಜ್ಯದಾದ್ಯಂತ ಸದ್ದು ಮಾಡುತ್ತಿದೆ ಮತ್ತು ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ನಗರದಲ್ಲಿಂದು ಮಾತಾಡಿದ ವಿಪಕ್ಷ ನಾಯಕ ಅರ್ ಅಶೋಕ (R Ashoka) ಇಬ್ಬರು ಶಾಸಕರು, ಶಾಸಕನ ಆಪ್ತ ತನ್ನೆರಾ ಮಹೀನ್ ಮತ್ತು ಕೊಡಗು ಪೊಲೀಸ್ ವರಿಷ್ಠಾಧಿಕಾರಿ ಸಾವಿಗೆ ಕಾರಣ ಡೆತ್ ನೋಟ್​ನಲ್ಲಿ ವಿನಯ್ ಬರೆದಿದ್ದಾರೆ. ವಿನಯ್ ಮತ್ತು ಅವರ ಪತ್ನಿ-ಇಬ್ಬರೂ ವಿದ್ಯಾವಂತರು, ಕೊಡಗಿನ ಎಸ್​ಪಿ ಬೆಂಗಳೂರುವರೆಗೆ ಬಂದು ವಿನಯ್​ಗೆ ಮಾನಸಿಕ ಕಿರುಕುಳ ನೀಡಿದ್ದಾನೆ, ಸುಮಾರು ಎರಡು ತಿಂಗಳು ಹಿಂದೆ ವಿನಯ್ ಅವರು ಅಭಿವೃದ್ಧಿ ಕಾಮಗಾರಿಯೊಂದನ್ನು ಸೋಶಿಯಲ್ ಮೀಡಿಯದಲ್ಲಿ ಅಪ್ಲೋಡ್ ಮಾಡಿದಾಗಿನಿಂದ ಶಾಸಕ, ಶಾಸಕನ ಆಪ್ತ ಮತ್ತು ಎಸ್ ಪಿ ಕಿರುಕುಳ ನೀಡಲು ಆರಂಭಿಸಿದ್ದಾರೆ ಎಂದು ಅಶೋಕ ಹೇಳಿದರು.

ಇದನ್ನೂ ಓದಿ:   ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ: ಡೆತ್​ನೋಟ್​ನಲ್ಲಿ ಸಿಎಂ ಕಾನೂನು ಸಲಹೆಗಾರರ ವಿರುದ್ಧ ಗಂಭೀರ ಆರೋಪ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Published on: Apr 04, 2025 05:34 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.