ಕಾರ್ಕಳ ಪ್ರಕರಣವನ್ನು ಸೆನ್ಸಿಟೈಸ್ ಮಾಡಲು ಬಿಡಲ್ಲ, ತಪ್ಪಿತಸ್ಥರಿಗೆ ಕಾನೂನುರೀತ್ಯಾ ಕ್ರಮ: ಪರಮೇಶ್ಬರ್

ಗೃಹ ಸಚಿವ ಜಿ ಪರಮೇಶ್ವರ್ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಜೊತೆ ದೆಹಲಿಗೆ ತೆರಳಿದ್ದರು. ಅವರಿಬ್ಬರು ಹೈಕಮಾಂಡ್ ಜೊತೆ ಮಾತುಕತೆ ನಡೆಸಿ ಬೆಂಗಳೂರಿಗೆ ವಾಪಸ್ಸಾದರೂ ಪರಮೇಶ್ವರ್ ಮಾತ್ರ ದೆಹಲಿಯಲ್ಲೇ ಉಳಿದಿರೋದು ಹಲವು ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ.

ಕಾರ್ಕಳ ಪ್ರಕರಣವನ್ನು ಸೆನ್ಸಿಟೈಸ್ ಮಾಡಲು ಬಿಡಲ್ಲ, ತಪ್ಪಿತಸ್ಥರಿಗೆ ಕಾನೂನುರೀತ್ಯಾ ಕ್ರಮ: ಪರಮೇಶ್ಬರ್
|

Updated on: Aug 24, 2024 | 4:52 PM

ದೆಹಲಿ: ಕಾರ್ಕಳ ಅತ್ಯಾಚಾರ ಪ್ರಕರಣ ರಾಜ್ಯದೆಲ್ಲೆಡೆ ಸುದ್ದಿಯಲ್ಲಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯದ ಪ್ರಕರಣಗಳು ಹೆಚ್ಚುತ್ತಿವೆ, ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಬಿಜೆಪಿ ನಾಯಕರು ಸರ್ಕಾರವನ್ನು ದೂರುತ್ತಿರುವ ಬಗ್ಗೆ ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಜಿ ಪರಮೇಶ್ವರ್, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ, ಅವರ ವಿರುದ್ಧ ಕಾನೂನು ರೀತ್ಯಾ ಕ್ರಮ ತೆಗೆದುಕೊಳ್ಳಲಾಗುತ್ತದೆ, ಈ ಹಿಂದೆ ಇಂಥ ಪ್ರಕರಣಗಳು ನಡೆದಾಗ ತಮ್ಮ ಸರ್ಕಾರ ಮುಲಾಜಿಲ್ಲದೆ ಕ್ರಮ ತೆಗೆದುಕೊಂಡಿದೆ ಎಂದು ಹೇಳಿದರು. ಇದೊಂದು ಲವ್ ಜಿಹಾದ್ ಪ್ರಕರಣದಂತೆ ಗೋಚರವಾಗುತ್ತಿದೆ ಅಂತ ಪತ್ರಕರ್ತರು ಹೇಳಿದಾಗ, ಹಾಗೆ ಕ್ರಿಯೇಟ್ ಮಾಡುವ ಪ್ರಯತ್ನ ನಡೆದಿದೆ ಅದರೆ ಸರ್ಕಾರ ಪ್ರಕರಣವನ್ನು ಸೆನ್ಸಿಟೈಸ್ ಮಾಡಲು ಬಿಡಲ್ಲ ಎಂದು ಪರಮೇಶ್ವರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಉಡುಪಿ: ಯುವತಿಗೆ ಮಾದಕ ಪದಾರ್ಥ ನೀಡಿ ಅತ್ಯಾಚಾರವೆಸಗಿದ ಅಲ್ತಾಫ್​  

Follow us