ನಿಮ್ಮ ಪತ್ನಿಗೆ ಈಡಿ ನೋಟೀಸ್ ಜಾರಿಮಾಡಿದೆಯಾ ಅಂದಾಗ ಸಿಎಂ ಸಿದ್ದರಾಮಯ್ಯಗೆ ಕೋಪವುಕ್ಕಿತು

ಅರುಣ್​ ಕುಮಾರ್​ ಬೆಳ್ಳಿ

Updated on: Nov 13, 2024 | 2:33 PM

ಸಿಎಂ ಪತ್ನಿ ಪಾರ್ವತಿಯವರಿಗೆ ಈಡಿ ನೋಟೀಸ್ ಏನಾದರೂ ನೀಡಿದೆಯಾ ಎಂದು ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಸಿದ್ದರಾಮಯ್ಯ ತಾಳ್ಮೆ ಕಳೆದುಕೊಂಡರು. ನೋಟೀಸ್ ಕೊಡುವ ವಿಚಾರ ನಿನ್ನೊಂದಿಗೇನಾದರೂ ಮಾತಾಡಿದ್ದಾರಾ? ಅವರ ಪರವಾಗಿ ನೀನ್ಯಾಕೆ ಮಾತಾಡೋದು ಎಂದು ಸಿದ್ದರಾಮಯ್ಯ ರೇಗಿದರು

ಮೈಸೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನಡೆಸುತ್ತ್ತಿರುವ ಬಗ್ಗೆ ಬಹಳ ಎಚ್ಚರಿಕೆಯಿಂದ ಮಾತಾಡಿದರು. ಮುಡಾ ಪ್ರಕರಣದ ಸಮಗ್ರ ತನಿಖೆ ಮಾಡುವ ಬದಲು ಈಡಿ ಅಧಿಕಾರಿಗಳು ಕೇವಲ ಅವರ ಪತ್ನಿ ಪಾರ್ವತಿಯವರಿಗೆ ಸಂಬಂಧಿಸಿದ 14 ಸೈಟುಗಳ ತನಿಖೆ ನಡೆಸುವ ಉದ್ದೇಶ ಹೊಂದಿರುವಂತಿದೆ ಎಂದು ಕೇಳಿದ ಪ್ರಶ್ನೆಗೆ ಸಿದ್ದರಾಮಯ್ಯ, ಈಡಿ ಒಂದು ತನಿಖಾ ಸಂಸ್ಥೆ, ಅದು ಏನೇನು ತನಿಖೆ ಮಾಡಬೇಕೆಂದಿದೆಯೋ ಮಾಡಲಿ ಎಂದರು..

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಸಚಿವ ಸಂಪುಟ ಪುನಾರಚನೆ ಇಲ್ಲ, ನಾಗೇಂದ್ರಗೆ ಸಚಿವ ಸ್ಥಾನ ನೀಡುವ ಬಗ್ಗೆಯಷ್ಟೇ ಚರ್ಚೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

Published on: Nov 13, 2024 01:37 PM
Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.