Assembly Polls: ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ: ಗಾಲಿ ಜನಾರ್ಧನ ರೆಡ್ಡಿ, ಕೆಆರ್ ಪಿಪಿ ಅಧ್ಯಕ್ಷ

|

Updated on: Jan 20, 2023 | 5:31 PM

ಅಭ್ಯರ್ಥಿಗಳ ವರ್ಚಸ್ಸು ಮತ್ತು ಗೆಲ್ಲಬಹುದಾದ ಸಾಧ್ಯತೆಯನ್ನು ಗಮನದಲ್ಲಿಟ್ಟಕೊಂಡು ಟಿಕೆಟ್ ನೀಡಲಾಗುವುದು ಎಂದು ರೆಡ್ಡಿ ಹೇಳಿದರು.

ಕೊಪ್ಪಳ: ನಗರದಲ್ಲಿಂದು ತಮ್ಮ ಪಕ್ಷದ ಅಭ್ಯರ್ಥಿಗಳು ಎಲ್ಲೆಲ್ಲಿಂದ ಸ್ಪರ್ಧಿಸಲಿದ್ದರೆ ಎನ್ನುವ ಬಗ್ಗೆ ಒಂದು ಚಿಕ್ಕ ವಿವರಣೆ ನೀಡಿದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷ ಗಾಲಿ ಜನಾರ್ಧನ ರೆಡ್ಡಿ (Gali Janardhan Reddy) ಅವರು, ಚುನಾವಣೆಯಲ್ಲಿ ಯಾವ ಪಕ್ಷದೊಂದಿಗೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಅಂತ ಸ್ಪಷ್ಟಪಡಿಸಿದರು. ಕೆಅರ್ ಪಿಪಿ (KRPP) ಅಭ್ಯರ್ಥಿಗಳು, ಕೊಪ್ಪಳ (Koppal), ಬಾಗಲಕೋಟೆ, ರಾಯಚೂರು, ಬಳ್ಳಾರಿ, ವಿಜಯನಗರ, ಯಾದಗಿರಿ, ವಿಜಯಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಮತಕ್ಷೇತ್ರಗಳಿಂದ ಸ್ಪರ್ಧಿಸುವ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ತಮ್ಮ ಕೈ ಸೇರಿದೆ. ಅಭ್ಯರ್ಥಿಗಳ ವರ್ಚಸ್ಸು ಮತ್ತು ಗೆಲ್ಲಬಹುದಾದ ಸಾಧ್ಯತೆಯನ್ನು ಗಮನದಲ್ಲಿಟ್ಟಕೊಂಡು ಟಿಕೆಟ್ ನೀಡಲಾಗುವುದು ಎಂದು ರೆಡ್ಡಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published on: Jan 20, 2023 02:44 PM