ಸಿದ್ದರಾಮಯ್ಯ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಿದರೂ ನಾವು ಸೋಲಿಸುವುದು ನಿಶ್ಚಿತ: ಕೆ ಎಸ್ ಈಶ್ವರಪ್ಪ
ಇನ್ನೂ ಚುನಾವಣೆ ಗಾವುದ ದೂರ ಇರುವಾಗಲೇ ಡಿಕೆ ಶಿವಕುಮಾರ ಮತ್ತು ಸಿದ್ದರಾಮಯ್ಯ ನಡುವೆ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ನಡೆದಿದೆ ಎಂದು ಈಶ್ವರಪ್ಪ ಗೇಲಿ ಮಾಡಿದರು.
ಶಿವಮೊಗ್ಗ: ಬಿಜೆಪಿ ಶಾಸಕ ಮತ್ತು ಪಕ್ಷದ ಹಿರಿಯ ನಾಯಕ ಕೆ ಎಸ್ ಈಶ್ವರಪ್ಪ (KS Eshwarappa) ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನಡುವೆ ಕೋಳಿ ಜಗಳ ಮುಂದುವರಿದಿದೆ ಮಾರಾಯ್ರೇ. ಶಿವಮೊಗ್ಗದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತಾಡಿದ ಈಶ್ವರಪ್ಪನವರು, ಸಿದ್ದರಾಮಯ್ಯ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಿದರೂ ಅವರನ್ನು ಖಚಿತವಾಗಿ ಸೋಲಿಸಲಾಗುವುದು ಎಂದು ಅವರು ಹೇಳಿದರು. ಅಸಲಿಗೆ ಕಾಂಗ್ರೆಸ್ ಪಕ್ಷದವರೇ ಸಿದ್ದರಾಮಯ್ಯ ಗೆಲ್ಲದಂತೆ ನೋಡಿಕೊಳ್ಳುವ ಸಂಚು ಹೂಡುತ್ತಿದ್ದಾರೆ. ಇನ್ನೂ ಚುನಾವಣೆ ಗಾವುದ ದೂರ ಇರುವಾಗಲೇ ಡಿಕೆ ಶಿವಕುಮಾರ (DK Shivakumar) ಮತ್ತು ಸಿದ್ದರಾಮಯ್ಯ ನಡುವೆ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ನಡೆದಿದೆ ಎಂದು ಈಶ್ವರಪ್ಪ ಗೇಲಿ ಮಾಡಿದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು

