ಡಿಕೆ ಶಿವಕುಮಾರ್ರನ್ನು ಸಿಎಂ ಮಾಡಿ ತೋರಿಸುತ್ತೇವೆ: ಸ್ವಾಮೀಜಿ ಶಪಥ
ಮುಡಾ ಹಗರಣದಲ್ಲಿರುವ ಸಿಲುಕಿರುವ ಸಿದ್ದರಾಮಯ್ಯನವರ ಕುರ್ಚಿ ಅಲುಗಾಡಲು ಶುರುವಾಗಿದೆ. ಈ ಮುಡಾ ಪ್ರಕರಣದಲ್ಲಿ ಇಡಿ ಪ್ರವೇಶ ಮಾಡಿದ್ದರಿಂದ ಸಿದ್ದರಾಮಯ್ಯನವರಿಗೆ ಆತಂಕವಾಗಿದೆ. ಇದರ ಮಧ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಸಿಎಂ ಬಗ್ಗೆ ಚರ್ಚೆಗಳು ಶುರುವಾಗಿವೆ. ಅದರಲ್ಲೂ ಸತೀಶ್ ಜಾರಕಿಹೊಳಿ ಓಡಾಟ ಸಂಚಲನ ಮೂಡಿಸಿದೆ. ಇದರ ಮಧ್ಯ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಸ್ವಾಮೀಜಿ ಅವರು ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡಿ ತೋರಿಸುತ್ತೇವೆ ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ.
ಗದಗ, (ಅಕ್ಟೋಬರ್ 20): ಮುಡಾ ಹಗರಣದಲ್ಲಿ ಎ1 ಆರೋಪಿಯಾಗಿರುವ ಸಿದ್ದರಾಮಯ್ಯನವರ ಸಿಎಂ ಕುರ್ಚಿಗೆ ಕಂಟಕ ಎದುರಾಗಿದೆ. ಈ ಬಗ್ಗೆ ಕಾಂಗ್ರೆಸ್ನಲ್ಲೇ ಸಿಎಂ ಕುರ್ಚಿ ವಿಚಾರವಾಗಿ ಭಾರೀ ಚರ್ಚೆಗಳು ನಡೆಯುತ್ತಿವೆ. ಅದರಲ್ಲೂ ಸಚಿವ ಸತೀಶ್ ಜಾತಕಿಹೊಳಿ ಓಡಾಟ ರಾಜ್ಯ ಕಾಂಗ್ರೆಸ್ನಲ್ಲಿ ಸಂಚಲನ ಮೂಡಿಸಿದೆ. ಒಂದು ವೇಳೆ ಸಿಎಂ ಬದಲಾವಣೆ ಮಾಡಿದರೆ ತಮ್ಮನ್ನು ಪರಿಗಣಿಸಬೇಕೆಂದು ಪರಮೇಶ್ವರ್, ಸತೀಶ್ ಜಾರಕಿಹೊಳಿ ಹೈಕಮಾಂಡ್ ನಾಯಕರ ಗಮನಕ್ಕೆ ತಂದಿದ್ದಾರೆ. ಇದರ ಮಧ್ಯ ಡಿಕೆ ಶಿವಕುಮಾರ್ ಸಹ ಆಕಾಂಕ್ಷಿಯಾಗಿದ್ದಾರೆ. ಇನ್ನೊಂದೆಡೆ ಯಾವುದೇ ಕಾರಣಕ್ಕೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲ್ಲ ಎಂದು ಹೈಕಮಾಂಡ್ ಕಡ್ಡಿ ಮುರಿದಂತೆ ಹೇಳಿದೆ. ಇದರ ಮಧ್ಯ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಸ್ವಾಮೀಜಿ , ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡಿ ತೋರಿಸುತ್ತೇವೆ ಎಂದು ಹೇಳಿದ್ದಾರೆ.
ಗದಗ ಜಿಲ್ಲೆ ಲಕ್ಷ್ಮೇಶ್ವರ ತಾ. ಮುಕ್ತಿಮಂದಿರ ಕ್ಷೇತ್ರದಲ್ಲಿ ನಡೆದ ರಂಭಾಪುರಿ ವೀರಗಂಗಾಧರ ಜಗದ್ಗುರುರುಗಳ 42 ವರ್ಷದ ಪುಣ್ಯಸ್ಮರಣೋತ್ಸವ ಸಮಾರಂಭದಲ್ಲಿ ಮಾತನಾಡಿದ ನೊಣವಿನಕೆರೆ ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ, ಮುಕ್ತಿಮಂದಿರ ಕ್ಷೇತ್ರದಲ್ಲಿ ತ್ರಿಕೋಟಿ ಲಿಂಗಗಳ ಸ್ಥಾಪನೆ ಅಷ್ಟೇ ಅಲ್ಲ. ಡಿಕೆಶಿಯನ್ನ ಮುಖ್ಯಮಂತ್ರಿ ಮಾಡಿ ಈ ಜಾಗದಲ್ಲಿ ಕರೆದುಕೊಂಡು ಬಂದು ಪೂಜೆ ಮಾಡಿ ತೋರಿಸುತ್ತೇನೆ ಎಂದಿದ್ದಾರೆ. ಈಗಾಗಲೇ ಹಲವಾರು ಬಾರಿ ಡಿಕೆಶಿ ಮುಖ್ಯಮಂತ್ರಿ ವಿಚಾರ ಪ್ರಸ್ತಾಪಿಸಿರುವ ನೊಣವಿನಕೆರೆ ಶ್ರೀ, ಇದೀಗ ಲಕ್ಷ್ಮೇಶ್ವರದ ಮುಕ್ತಿಮಂದಿರದಲ್ಲಿ ಮತ್ತೊಮ್ಮೆ ಘಂಟಾಘೋಷವಾಗಿ ಹೇಳಿಕೆ ನೀಡಿರುವುದು ಸಂಚಲನ ಮೂಡಿಸಿದೆ.